ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಫೋನ್ ಬೆಲೆಯಲ್ಲಿ ಈಗ ಮತ್ತೆ ಭಾರೀ ಇಳಿಕೆ!
ಸ್ಯಾಮ್‌ಸಂಗ್ ಸಂಸ್ಥೆಯು ಹೈ ಎಂಡ್ ಮಾದರಿಯ ಫೋನ್‌ಗಳ ಜೊತೆಗೆ ಬಜೆಟ್ ಪ್ರೈಸ್ ಟ್ಯಾಗ್‌ನ ಫೋನ್‌ಗಳಿಂದಲೂ ಗಮನ ಸೆಳೆದಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 15,000ರೂ.ಗಳ ಆಸುಪಾಸಿನಲ್ಲಿ ಆಕರ್ಷಕ ಎನಿಸಿದೆ. ಆದ್ರೆ ಇದೀಗ ಇ ಕಾಮರ್ಸ್ ದೈತ್ಯ ಅಮೆಜಾನ್‌ನ ಹ್ಯಾಪಿನೆಸ್ ಅಪ್‌ಗ್ರೇಡ್ ಡೇಸ್ (Happiness Upgrade Days) ಸೇಲ್‌ನಲ್ಲಿ ಭರ್ಜರಿ ಬೆಲೆ ಇಳಿಕೆ ಪಡೆದಿದೆ.

ಹೌದು, ಅಮೆಜಾನ್ ತಾಣವು ಇತ್ತೀಚಿಗಷ್ಟೆ ದಸರಾ ಹಬ್ಬದ ಪ್ರಯುಕ್ತ ಅಮೆಜಾನ್ ಆಯೋಜಿಸಿದ್ದ ಸೇಲ್ ಇತ್ತೀಚಿಗಷ್ಟೆ ಮುಕ್ತಾಯವಾಗಿದ್ದು, ಅದರ ಮುಂದುವರಿದ ಭಾಗವಾಗಿ ಹ್ಯಾಪಿನೆಸ್ ಅಪ್‌ಗ್ರೇಡ್ ಡೇಸ್ (Happiness Upgrade Days) ಪ್ರಾರಂಭಿಸಿದೆ. ಈ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 2000ರೂ. ಗಳ ಬೆಲೆ ಇಳಿಕೆ ಕಂಡಿದೆ. ಬೆಲೆ ಇಳಿಕೆಯಿಂದಾಗಿ ಬೇಸ್ ವೇರಿಯಂಟ್ 11,999ರೂ. ಗಳಿಗೆ ಲಭ್ಯವಾಗಲಿದೆ.

ಹಾಗೆಯೇ ಸಿಟಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ 1250ರೂ. ಗಳ ವರೆಗೂ ಆಫರ್ ಸಹ ಲಭ್ಯವಾಗಲಿದೆ. ಇನ್ನು ಈ ಫೋನ್ 4GB RAM + 64GB ಸ್ಟೋರೇಜ್ ಹಾಗೂ 6GB RAM ಮತ್ತು 128GB ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ಯಾಲಕ್ಸಿ M13 5G ಡಿಸ್‌ಪ್ಲೇ ಮತ್ತು ಪ್ರೊಸೆಸರ್ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ One UI 4 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಟೋರೇಜ್ ಸಾಮರ್ಥ್ಯ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಮೂಲಕ RAM ಅನ್ನು 12GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ ಫೀಚರ್ಸ್‌ಗಳೇನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಫೋನ್‌ನಲ್ಲಿ AI ಪವರ್ ಮ್ಯಾನೇಜ್‌ಮೆಂಟ್ ಅನ್ನು ಕೂಡ ನೀಡಲಾಗಿದ್ದು, ನೀವು ಮೂರು ದಿನಗಳವರೆಗೆ ಬಳಸದ ಅಪ್ಲಿಕೇಶನ್‌ಗಳನ್ನು ಸ್ಲಿಪ್‌ಮೋಡ್‌ಗೆ ತಳ್ಳುತ್ತದೆ. ಇದರಿಂದ ನಿಮ್ಮ ಬ್ಯಾಟರಿ ಪವರ್ ಇನ್ನಷ್ಟು ಸೇವ್ ಆಗಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಆಯ್ಕೆಗಳಲ್ಲಿ ವೈ-ಫೈ, 5 ಜಿ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.


Click it and Unblock the Notifications








