ಸ್ಯಾಮ್‌ಸಂಗ್ ಪ್ರಿಯರಿಗೆ ಸಿಹಿಸುದ್ದಿ!..ಗ್ಯಾಲಕ್ಸಿ M13 ಭಾರೀ ಡಿಸ್ಕೌಂಟ್‌ನಲ್ಲಿ ಲಭ್ಯ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಎಂದು ಗುರುತಿಸಿಕೊಂಡಿರುವ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ಗ್ಯಾಲಕ್ಸಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಫೋನ್ ಬಜೆಟ್ ಪ್ರೈಸ್ ಟ್ಯಾಗ್ ಜೊತೆಗೆ ಬೊಂಬಾಟ್ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಸೆಳೆದಿದೆ. ಆದ್ರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಫೋನ್ ಈಗ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ಈ ಫೋನಿನತ್ತ ಮತ್ತೆ ಆಕರ್ಷಕವಾಗುವಂತೆ ಮಾಡಿದೆ.
ಹೌದು, ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 4GB RAM ಮತ್ತು 64GB ವೇರಿಯಂಟ್ ಫೋನ್ 27% ವರೆಗೂ ಡಿಸ್ಕೌಂಟ್ ಪಡೆದಿದ್ದು, 10,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಸಿಗಲಿದೆ (ಹಳೆಯ ಫೋನ್ ಸ್ಥಿತಿ ಆಧರಿಸಿ), ಹಾಗೆಯೇ ಬ್ಯಾಂಕ್ ಆಫರ್ ಗಳನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ವಿವರವಾಗಿ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ಪ್ರೊಸೆಸರ್ ಕಾರ್ಯವೈಖರಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 480 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದು ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಎಕ್ಸಿನೋಸ್ 850 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12.0-ಆಧಾರಿತ ಒನ್ UI 4 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಸ್ಟೋರೇಜ್ ಎಷ್ಟಿದೆ? ಕ್ಯಾಮೆರಾ ವಿಶೇಷತೆ ಏನು : ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದರಲ್ಲಿ ಸ್ಯಾಮ್‌ಸಂಗ್ RAM ಪ್ಲಸ್ ಫೀಚರ್ಸ್ ಮೂಲಕ RAM ಅನ್ನು 12GB ವರೆಗೆ ವಿಸ್ತರಿಸಬಹುದು. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಅನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ.

ಬ್ಯಾಟರಿ ಸಾಮರ್ಥ್ಯ ಏನು? ಇತರೆ ಫೀಚರ್ಸ್ ಯಾವುವು : ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, 4G LTE ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ. ಈ ಫೋನ್ ಕೂಡ AI ಪವರ್ ಮ್ಯಾನೇಜ್‌ಮೆಂಟ್ ಅನ್ನು ಕೂಡ ನೀಡಲಾಗಿದ್ದು, ನೀವು ಮೂರು ದಿನಗಳವರೆಗೆ ಬಳಸದ ಅಪ್ಲಿಕೇಶನ್‌ಗಳನ್ನು ಸ್ಲಿಪ್‌ಮೋಡ್‌ಗೆ ತಳ್ಳುತ್ತದೆ. ಇದರಿಂದ ಬ್ಯಾಟರಿ ಸೇವ್ ಆಗಲಿದೆ.
ಮೆಮೊರಿ ಹಾಗೂ ಕಲರ್ ಆಯ್ಕೆ : ಭಾರತದಲ್ಲಿ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ರೂಪಾಂತರ ಮತ್ತು 6GB RAM + 128GB ಸ್ಟೋರೇಜ್ ಆವೃತ್ತಿ ಆಯ್ಕೆಗಳನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ಗಳು ಆಕ್ವಾ ಗ್ರೀನ್, ಮಿಡ್‌ನೈಟ್ ಬ್ಲೂ ಮತ್ತು ಸ್ಟಾರ್‌ಡಸ್ಟ್ ಬ್ರೌನ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.


Click it and Unblock the Notifications








