Just In
Don't Miss
- News
ಭಾರತದಲ್ಲಿ 196 ಕೋಟಿ ದಾಟಿದ ಕೋವಿಡ್ ಲಸಿಕಾ ಅಭಿಯಾನ
- Movies
ದುಬೈನಲ್ಲಿ ಅಪ್ಪು ನೆಚ್ಚಿನ ಲ್ಯಾಂಬೋರ್ಗಿನಿ ಕಾರ್: ಯಾರು ಬಳಸುತ್ತಾರೆ ಗೊತ್ತಾ?
- Automobiles
ಬರೋಬ್ಬರಿ 40 ವೆರಿಯೆಂಟ್ಗಳನ್ನು ಹೊಂದಿರಲಿದೆ ಹೊಸ ಮಹೀಂದ್ರಾ ಸ್ಕಾರ್ಪಿಯೋ-ಎನ್
- Finance
ಅತೀ ಕಡಿಮೆ ಬಡ್ಡಿದರದಲ್ಲಿ ವೈಯಕ್ತಿಕ ಸಾಲ ನೀಡುತ್ತೆ ಈ ಬ್ಯಾಂಕುಗಳು!
- Sports
1983ರ ವಿಶ್ವಕಪ್ ವಿಜಯೋತ್ಸವಕ್ಕೆ 39 ವರ್ಷಗಳು: ಇಡೀ ದೇಶಕ್ಕೆ ಸ್ಫೂರ್ತಿ ನೀಡಿದ್ದ ಕಪಿಲ್ ದೇವ್ ತಂಡ!
- Education
BIMS Belagavi Recruitment 2022 : 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಪುರುಷರಲ್ಲಿ ಲೈಂಗಿಕ ಶಕ್ತಿಯ ಸಮಸ್ಯೆಗೆ ಈ ಹಣ್ಣುಗಳೇ ಪವರ್ಫುಲ್ ಮದ್ದು
- Travel
ನಿಮ್ಮ ಮುಂದಿನ ಪ್ರವಾಸದ ಪಟ್ಟಿಯಲ್ಲಿ ಕರ್ನಾಟಕದ ಬಾದಾಮಿ ಯಾಕಿರಬೇಕು? ಇಲ್ಲಿದೆ ಕಾರಣ!
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ! ವಿಶೇಷತೆ ಏನು?
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್ಸಂಗ್ ತನ್ನ ವೈವಿಧ್ಯಮಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎ, ಗ್ಯಾಲಕ್ಸಿ ಎಸ್ ಸರಣಿಯಲ್ಲಿ ಹಲವು ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಗ್ಯಾಲಕ್ಸಿ ಎಂ ಸರಣಿಯಲ್ಲಿ ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಅನ್ನು ಸೈಲೆಂಟ್ ಆಗಿ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ ಇದೀಗ ಅಧಿಕೃತ ಸ್ಯಾಮ್ಸಂಗ್ ಸೈಟ್ನಲ್ಲಿ ಪಟ್ಟಿಮಾಡಲ್ಪಟ್ಟಿದೆ.

ಹೌದು, ಸ್ಯಾಮ್ಸಂಗ್ ಕಂಪೆನಿ ತನ್ನು ಹೊಸ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ಇದು ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ ಸಾಧ್ಯತೆಯಿದೆ. ಇನ್ನುಳಿದಂತೆ ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಏನೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಈ ಸ್ಮಾರ್ಟ್ಫೋನ್ 6.6 ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ ವಾಟರ್ಡ್ರಾಪ್ ಶೈಲಿಯ ನಾಚ್ ಅನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಗ್ಯಾಲಕ್ಸಿ M13 ಸ್ಮಾರ್ಟ್ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್ಸಂಗ್ M13 ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಡಿವೈಸ್ ಸ್ಯಾಮ್ಸಂಗ್ನ ನಾಕ್ಸ್ ಮೊಬೈಲ್ ಭದ್ರತಾ ವೇದಿಕೆಯೊಂದಿಗೆ ಬರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ ಮತ್ತು ಬ್ಲೂಟೂತ್ v5.0 ಸಂಪರ್ಕವನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್ಫೋನ್ನ ಬೆಲೆ ಹಾಗೂ ಲಭ್ಯತೆಯ ವಿವರವನ್ನು ಇನ್ನು ಬಹಿರಂಗಪಡಿಸಿಲ್ಲ.

ಇದಲ್ಲದೆ ಸ್ಯಾಮ್ಸಂಗ್ ಕಂಪೆನಿ ಮುಂದಿನ ವರ್ಷದಿಂದ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳನ್ನು ಭಾರತದಲ್ಲಿ ಮಾಡುವುದಿಲ್ಲ ಎಂದು ವರದಿಯಾಗಿದೆ. ಈ ವರ್ಷಾಂತ್ಯದ ವೇಳೆಗೆ ತನ್ನ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳ ಸ್ಟಾಕ್ ಅನ್ನು ಸೇಲ್ ಮಾಡಲಿದೆ. ಬಜೆಟ್ ಸ್ಮಾರ್ಟ್ಫೋನ್ಗಳ ಕೊನೆಯ ಬ್ಯಾಚ್ ಅನ್ನು ಸ್ಯಾಮ್ಸಂಗ್ನ ಒಪ್ಪಂದದ ಪಾಲುದಾರ ಡಿಕ್ಸನ್ ಈ ಡಿಸೆಂಬರ್ನಲ್ಲಿ ತಯಾರಿಸುತ್ತಾರೆ.
ಪ್ರಸ್ತುತ ಭಾರತ ಸರ್ಕಾರದ ಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಗೆ ಕೊಡುಗೆ ನೀಡುವ ಪ್ರಮುಖ ಎಂಎನ್ಸಿ ಕಂಪನಿಗಳಲ್ಲಿ ಸ್ಯಾಮ್ಸಂಗ್ ಒಂದಾಗಿದೆ. ಈ ಪ್ಲಾನ್ನಲ್ಲಿ ತಯಾರಕರು ಸ್ಥಳೀಯ ಉತ್ಪಾದನೆಗಾಗಿ ಸರ್ಕಾರದಿಂದ sops ಪಡೆಯಲು ಅವಕಾಶವಿದೆ. ಆದರೆ ಈ ಫೋನ್ಗಳು 15,000ರೂ. ಫ್ಯಾಕ್ಟರಿ ಬೆಲೆಯನ್ನು ಹೊಂದಿರಬೇಕಾಗುತ್ತದೆ. ಇದರಿಂದ ಸ್ಯಾಮ್ಸಂಗ್ ಕಂಪೆನಿ 20,000ರೂ. ಅಥವಾ ಅದಕ್ಕಿಂತ ಹೆಚ್ಚಿನ ಮಾರುಕಟ್ಟೆಯತ್ತ ಗಮನಹರಿಸಲು ಕಾರಣವಾಗಿರಬಹುದು.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999