Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌!..ಬ್ಯಾಂಕ್‌ ಆಫರ್‌ ಇದೆ!

ಸ್ಯಾಮ್‌ಸಂಗ್‌ ಸಂಸ್ಥೆಯು ಇತ್ತೀಚಿಗೆ ಲಾಂಚ್ ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಬಜೆಟ್‌ ದರದಲ್ಲಿ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ. ಈ ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ OMG ಎನ್ನುವಂತೆ ಮಾಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ 4GB RAM +128 GB ಸ್ಟೋರೇಜ್ ವೇರಿಯಂಟ್ ಅಮೆಜಾನ್ ಆನ್‌ಲೈನ್‌ ತಾಣದಲ್ಲಿ ಈಗ 17% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಈ ಫೋನ್‌ ಅನ್ನು 17,990ರೂ. ಬದಲಿಗೆ ಗ್ರಾಹಕರು 14,990ರೂ. ಪ್ರೈಸ್‌ ಟ್ಯಾಗ್‌ ನಲ್ಲಿ ಖರೀದಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕ್ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸಹ ಲಭ್ಯವಾಗಲಿವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್‌!

ಅಂದಹಾಗೆ ಈ ಫೋನ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್ ಹೊಂದಿದ್ದು, 6000 mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆ ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಡಿಸ್‌ಪ್ಲೇ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಪ್ರೊಸೆಸರ್‌ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್‌ ಅನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ನೊಂದಿಗೆ ಬರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಕ್ಯಾಮೆರಾ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬ್ಯಾಟರಿ ಮತ್ತು ಇತರೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್‌ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್‌ ಅನ್ನು ಹೊಂದಿದೆ.

ಇದರೊಂದಿಗೆ ಕರೆಗಳ ಸಮಯದಲ್ಲಿ ಬ್ಯಾಕ್‌ಗ್ರೌಂಡ್‌ ಶಬ್ದವನ್ನು ಕ್ಯಾನ್ಸಲ್‌ ಮಾಡುವುದಕ್ಕಾಗಿ ವಾಯ್ಸ್ ಫೋಕಸ್ ಫೀಚರ್ಸ್‌ ಅನ್ನು ಸೇರ್ಪಡೆ ಮಾಡಿದೆ. ಈ ಫೋನ್‌ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಪಡೆದಿದೆ.

Best Mobiles in India

English summary
Samsung Galaxy M14 5G available on best deal on amazon: check offer price and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+