ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫಸ್ಟ್ ಸೇಲ್!..ಕಡಿಮೆ ಬೆಲೆಗೆ ಲಭ್ಯ!
ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಇಂದು ಮಾರಾಟ ಪ್ರಾರಂಭಿಸಲಿದೆ. ಮಧ್ಯಾಹ್ನ 12 ಗಂಟೆಯಿಂದ ಇ ಕಾಮರ್ಸ್ ತಾಣ ಅಮೆಜಾನ ಮತ್ತು ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಸೇಲ್ ಪ್ರಾರಂಭಿಸಲಿದೆ. ಅಂದಹಾಗೆ ಈ ಫೋನ್ ಕಡಿಮೆ ದರ ಹೊಂದಿದ್ದು, 5G ನೆಟ್‌ವರ್ಕ್ ಸಪೋರ್ಟ್ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನ್ ಇಂದು (ಏ. 21) ಅಮೆಜಾನ್‌ನಲ್ಲಿ ಮಾರಾಟ ಶುರು ಮಾಡಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB + 128GB ಹಾಗೂ 6GB + 128 GB ಆಗಿವೆ. ಇನ್ನು ಈ ಫೋನ್ ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನ್ ಎಕ್ಸಿನೋಸ್ 1330 ಆಕ್ಟಾ ಕೋರ್ SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಹಾಗೆಯೇ ಈ ಫೋನಿನ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನ್ ಬೆಲೆ ಎಷ್ಟು? ಈ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಡಿಸ್‌ಪ್ಲೇ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್ ಅನ್ನು ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಪ್ರೊಸೆಸರ್ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಎಕ್ಸಿನೋಸ್ 1330 ಆಕ್ಟಾ-ಕೋರ್ SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್ ಅನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್‌ನೊಂದಿಗೆ ಬರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಕ್ಯಾಮೆರಾ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಬ್ಯಾಟರಿ ಮತ್ತು ಇತರೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಇದರೊಂದಿಗೆ ಕರೆಗಳ ಸಮಯದಲ್ಲಿ ಬ್ಯಾಕ್‌ಗ್ರೌಂಡ್ ಶಬ್ದವನ್ನು ಕ್ಯಾನ್ಸಲ್ ಮಾಡುವುದಕ್ಕಾಗಿ ವಾಯ್ಸ್ ಫೋಕಸ್ ಫೀಚರ್ಸ್ ಅನ್ನು ಸೇರ್ಪಡೆ ಮಾಡಿದೆ. ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಪಡೆದಿದೆ.
ಬೆಲೆ ಮತ್ತು ಲಭ್ಯತೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ ಭಾರತದಲ್ಲಿ 4GB + 128GB ರೂಪಾಂತರದ ಆಯ್ಕೆಗೆ 13,490ರೂ. ಬೆಲೆ ಪಡೆದಿದೆ. ಇನ್ನು 6GB + 128GB ರೂಪಾಂತರದ ಆಯ್ಕೆಯು 14,990ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೊನ್ ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ರೂಪಾಂತರದ ಆಯ್ಕೆಗಳಲ್ಲಿ ಬರಲಿದೆ. ಇಂದು ಏಪ್ರಿಲ್ 21 ರಂದು ಅಮೆಜಾನ್ ಮತ್ತು ಆಯ್ದ ರಿಟೇಲ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








