ಈ ನೂತನ 5G ಸ್ಯಾಮ್‌ಸಂಗ್ ಫೋನ್ ಬೆಲೆಯಲ್ಲಿ ಇಳಿಕೆ!..ಉಳಿತಾಯ ಪಕ್ಕಾ!
ಪ್ರಮುಖ ಇ ಕಾಮರ್ಸ್ ತಾಣ ಅಮೆಜಾನ್ ಸಂಸ್ಥೆಯು ಫೋನ್‌ಗಳಿಗೆ ಸ್ಪೆಷಲ್ ಡಿಸ್ಕೌಂಟ್ ಲಭ್ಯ ಮಾಡುತ್ತಾ, ಗ್ರಾಹಕರ ಗಮನ ಸೆಳೆಯುತ್ತದೆ. ಸದ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನ್ ಸಹ ಆಕರ್ಷಕ ರಿಯಾಯಿತಿ ಪಡೆದಿದ್ದು, ಗ್ರಾಹಕರಿಗೆ ಸಖತ್ ಖುಷಿ ಎನಿಸಿದೆ.
ಹೌದು, ಅಮೆಜಾನ್ ಆನ್‌ಲೈನ್ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ ಶೇ. 33% ರಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. 4GB RAM + 128 GB ಸ್ಟೋರೇಜ್ ವೇರಿಯಂಟ್ ದರವು 17,990ರೂ. ಇದ್ದು, ಆಫರ್‌ನಲ್ಲಿ ಗ್ರಾಹಕರು 11,990ರೂ. ಪ್ರೈಸ್ ಟ್ಯಾಗ್ ನಲ್ಲಿ ಖರೀದಿ ಮಾಡಬಹುದಾಗಿದೆ. ಇದರ ಜೊತೆಗೆ ಬ್ಯಾಂಕ್ ಕೊಡುಗೆ ಹಾಗೂ ನೋ ಕಾಸ್ಟ್ ಇಎಮ್‌ಐ ಕೂಡಾ ದೊರೆಯುತ್ತದೆ.

ಅಂದಹಾಗೆ ಈ ಮೊಬೈಲ್ 6000 mAh ಬ್ಯಾಟರಿ ಬ್ಯಾಕ್‌ಅಪ್ ಬಲ ಪಡೆದಿದ್ದು, 50 ಮೆಗಾಪಿಕ್ಸೆಲ್ ಸೆನ್ಸಾರ್ ಮೊದಲ ಕ್ಯಾಮೆರಾ ಒಳಗೊಂಡಿದೆ. ಗ್ರಾಹಕರು ಈ ಮೊಬೈಲ್ ಅನ್ನು ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸದ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇದು 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್ ಅನ್ನು ಹೊಂದಿದೆ.
ಹೇಗಿದೆ ಗ್ಯಾಲಕ್ಸಿ M14 5G ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಫೋನ್ ಎಕ್ಸಿನೋಸ್ 1330 ಆಕ್ಟಾ ಕೋರ್ SoC ಪ್ರೊಸೆಸರ್ ಸ್ಪೀಡ್ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್ ಅನ್ನು ಒಳಗೊಂಡಿದ್ದು, ಹಾಗೆಯೇ 6GB RAM ಮತ್ತು 128GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದೆ.
ತ್ರಿವಳಿ ಕ್ಯಾಮೆರಾ ಸೌಲಭ್ಯ
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಪಡೆದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.
ಬಿಗ್ ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು 25W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G, ವೈಫೈ, ಬ್ಲೂಟೂತ್ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್ ಅನ್ನು ಪಡೆದಿವೆ.


Click it and Unblock the Notifications








