Home
ಸುದ್ದಿಜಾಲ

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ! 6,000mAh ಬ್ಯಾಟರಿ ವಿಶೇಷ!

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಭಾರತದಲ್ಲಿ ಹೊಸ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಬಹು ದಿನಗಳಿಂದ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಈ ಸ್ಮಾರ್ಟ್‌ಫೋನ್‌ ಇಂದು ಅಧಿಕೃತವಾಗಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುವುದು ಹೈಲೈಟ್‌ ಆಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಾಂಚ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 5nm ಎಕ್ಸಿನೋಸ್‌ 1330 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ! 6,000mAh ಬ್ಯಾಟರಿ !

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಡಿಸ್‌ಪ್ಲೇ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 1330 ಆಕ್ಟಾ-ಕೋರ್ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್‌ ಅನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ನೊಂದಿಗೆ ಬರಲಿದೆ.

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ! 6,000mAh ಬ್ಯಾಟರಿ !

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಕ್ಯಾಮೆರಾ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್‌ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್‌ ಅನ್ನು ಹೊಂದಿದೆ. ಇದರೊಂದಿಗೆ ಕರೆಗಳ ಸಮಯದಲ್ಲಿ ಬ್ಯಾಕ್‌ಗ್ರೌಂಡ್‌ ಶಬ್ದವನ್ನು ಕ್ಯಾನ್ಸಲ್‌ ಮಾಡುವುದಕ್ಕಾಗಿ ವಾಯ್ಸ್ ಫೋಕಸ್ ಫೀಚರ್ಸ್‌ ಅನ್ನು ಸೇರ್ಪಡೆ ಮಾಡಿದೆ. ಈ ಫೋನ್‌ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಪಡೆದಿದೆ.

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ! 6,000mAh ಬ್ಯಾಟರಿ !

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB + 128GB ರೂಪಾಂತರದ ಆಯ್ಕೆಗೆ 13,490ರೂ. ಬೆಲೆ ಪಡೆದಿದೆ. ಇನ್ನು 6GB + 128GB ರೂಪಾಂತರದ ಆಯ್ಕೆಯು 14,990ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೊನ್‌ ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ರೂಪಾಂತರದ ಆಯ್ಕೆಗಳಲ್ಲಿ ಬರಲಿದೆ. ಇದು ಇದೇ ಏಪ್ರಿಲ್ 21 ರಂದು ದೇಶದಲ್ಲಿ ಅಮೆಜಾನ್‌ ಮತ್ತು ಆಯ್ದ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Samsung smartphone features a 6.6-inch PLS LCD display panel with a full-HD+ (2408 x 1080 pixels) resolution.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+