Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವವರಿಗೆ ಸಿಹಿಸುದ್ದಿ!..ಈ 5G ಫೋನ್‌ ಬೆಲೆ ಇಳಿಕೆ!

ಜನಪ್ರಿಯ ಮೊಬೈಲ್‌ ಬ್ರ್ಯಾಂಡ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ ಮಾಡೆಲ್‌ಗಳನ್ನು ಪರಿಚಯಿಸಿದೆ. ಅವುಗಳ ಪೈಕಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಕೂಡಾ ಒಂದಾದಗಿದ್ದು, ಈ ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದಿದ್ದು, ಗ್ರಾಹಕರಿಗೆ ಭಾರೀ ಖುಷಿ ಎನಿಸಿದೆ.

ಹೌದು, ಅಮೆಜಾನ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಮೊಬೈಲ್‌ ಶೇ. 31% ರಷ್ಟು ನೇರ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 4GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 12,490ರೂ. ಪ್ರೈಸ್‌ ಟ್ಯಾಗ್‌ ನಲ್ಲಿ ಖರೀದಿ ಮಾಡಬಹುದಾಗಿದೆ. ಇದರ ಜೊತೆಗೆ ಅಮೆಜಾನ್‌ನಲ್ಲಿ ಲಭ್ಯ ಇರುವ ಇತರೆ ಬ್ಯಾಂಕ್‌ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸಹ ಪಡೆಯಬಹುದು.

ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವವರಿಗೆ ಸಿಹಿಸುದ್ದಿ!..ಈ 5G ಫೋನ್‌ ಬೆಲೆ ಇಳಿಕೆ!

ಇನ್ನು ಈ ಫೋನ್‌ 6000 mAh ಬ್ಯಾಟರಿ ಸೌಲಭ್ಯ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಬಲದಲ್ಲಿದೆ. ಹಾಗೆಯೇ ಈ ಮೊಬೈಲ್‌ 4GB RAM + 128GB 6GB RAM + 128GB ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದು ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವವರಿಗೆ ಸಿಹಿಸುದ್ದಿ!..ಈ 5G ಫೋನ್‌ ಬೆಲೆ ಇಳಿಕೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G - ಫೀಚರ್ಸ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಇದು 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ಸ್ಪೀಡ್‌ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 13 ಸಪೋರ್ಟ್‌ ಜೊತೆಗೆ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್‌ ಅನ್ನು ಒಳಗೊಂಡಿದ್ದು, ಹಾಗೆಯೇ 4GB RAM + 128 GB ಹಾಗೂ 6GB RAM + 128 GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒದಗಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G, ವೈಫೈ, ಬ್ಲೂಟೂತ್‌ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್‌ ಅನ್ನು ಒಳಗೊಂಡಿದೆ.

Best Mobiles in India

English summary
Samsung Galaxy M14 5G received biggest price cut in india. check offer price and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+