Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಮೊಬೈಲ್‌ ಖರೀದಿಸಬೇಕೆ? ಈ ಸ್ಮಾರ್ಟ್‌ಫೋನ್‌ ಮೇಲೆ ಭಾರಿ ರಿಯಾಯಿತಿ!

ಸ್ಮಾರ್ಟ್‌ಫೋನ್‌ ಖರೀದಿಸುವಾಗ ಜನರು ಜನಪ್ರಿಯ ಬ್ರ್ಯಾಂಡ್‌ಗಳಿಗೆ ಹೆಚ್ಚಿನ ಒತ್ತನ್ನು ನೀಡುತ್ತಾರೆ. ಇದರಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ಕೂಡ ಒಂದಾಗಿದ್ದು, ವಿಭಿನ್ನ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿದೆ. ಇದೀಗ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಅಮೆಜಾನ್‌ನಲ್ಲಿ ಬಿಗ್‌ ಆಫರ್‌ ಪಡೆದುಕೊಂಡಿದ್ದು, ಸಂಚಲನ ಸೃಷ್ಟಿಸಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಮೇಲೆ ಅಮೆಜಾನ್‌ ತಾಣದಲ್ಲಿ ವಿಶೇಷ ರಿಯಾಯಿತಿ ನೀಡುತ್ತಿದೆ. ಇದು ಸ್ಮಾರ್ಟ್‌ಫೋನ್‌ನ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ ಲಭ್ಯವಾಗುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆರ್ರಿ ಬ್ಲೂ ಕಲರ್‌ ಆಯ್ಕೆಯಲ್ಲಿ ದೊರೆಯಲಿದೆ. ಹಾಗಾದ್ರೆ ಅಮೆಜಾನ್‌ ತಾಣದಲ್ಲಿ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಮೇಲೆ ಲಭ್ಯವಾಗುತ್ತಿರುವ ಡಿಸ್ಕೌಂಟ್‌ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ ಮೊಬೈಲ್‌ ಖರೀದಿಸಬೇಕೆ? ಈ ಸ್ಮಾರ್ಟ್‌ಫೋನ್‌ ಮೇಲೆ ಭಾರಿ ರಿಯಾಯಿತಿ!

ಡಿಸ್ಕೌಂಟ್‌ ನಂತರದ ಬೆಲೆ ಎಷ್ಟು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ 18,990ರೂ ಗಳಿಗೆ ಪಟ್ಟಿಮಾಡಲಾಗಿದೆ. ಆದರೆ ಇದೀಗ 31% ಡಿಸ್ಕೌಂಟ್‌ ಪಡೆದುಕೊಂಡಿರುವುದರಿಂದ ಇದನ್ನು ಕೇವಲ 13,039ರೂ ಬೆಲೆಯಲ್ಲಿ ಖರೀದಿಗೆ ಲಭ್ಯವಾಗುತ್ತಿದೆ. ಇದಲ್ಲದೆ ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೇಲೆ ಹೆಚ್ಚುವರಿ ಫ್ಲಾಟ್ 500ರೂ ತ್ವರಿತ ರಿಯಾಯಿತಿ ಸಿಗಲಿದೆ. ಜೊತೆಗೆ ನೋ ಕಾಸ್ಟ್‌ ಇಎಂಐ ಆಯ್ಕೆಯು ಕೂಡ ದೊರೆಯಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೀಚರ್ಸ್‌ ಹೇಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್‌ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಮೊಬೈಲ್‌ ಖರೀದಿಸಬೇಕೆ? ಈ ಸ್ಮಾರ್ಟ್‌ಫೋನ್‌ ಮೇಲೆ ಭಾರಿ ರಿಯಾಯಿತಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಪ್ರೊಸೆಸರ್‌ ಕಾರ್ಯದಕ್ಷತೆ ಹೇಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್‌ ಅನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಕ್ಯಾಮೆರಾ ಸೆಟ್‌ಅಪ್‌ ಏನಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿದೆ.

ಸ್ಯಾಮ್‌ಸಂಗ್‌ ಮೊಬೈಲ್‌ ಖರೀದಿಸಬೇಕೆ? ಈ ಸ್ಮಾರ್ಟ್‌ಫೋನ್‌ ಮೇಲೆ ಭಾರಿ ರಿಯಾಯಿತಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್‌ 5.2, NFC ಮತ್ತು GPS ಹಾಗೂ USB ಟೈಪ್-C ಪೋರ್ಟ್‌ ಅನ್ನು ಹೊಂದಿದೆ. ಇದಲ್ಲದೆ ಕರೆಗಳ ಸಮಯದಲ್ಲಿ ಬ್ಯಾಕ್‌ಗ್ರೌಂಡ್‌ ನಾಯ್ಸ್‌ ಕ್ಯಾನ್ಸಲ್‌ ಮಾಡುವುದಕ್ಕಾಗಿ ವಾಯ್ಸ್ ಫೋಕಸ್ ಫೀಚರ್ಸ್‌ ಅನ್ನು ಕೂಡ ಹೊಂದಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಪಡೆದಿದೆ.

Best Mobiles in India

English summary
Samsung Galaxy M14 5G Smartphone Available with Huge discount in Amazon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+