Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ!..6000mAh ಬ್ಯಾಟರಿ ಸಾಮರ್ಥ್ಯ!

ಸ್ಯಾಮ್‌ಸಂಗ್‌ ಕಂಪೆನಿ ಜಾಗತಿಕ ಮಾರುಕಟ್ಟೆಯ ದೈತ್ಯ ಬ್ರ್ಯಾಂಡ್‌ಗಳಲ್ಲಿ ಒಂದೆನಿಸಿಕೊಂಡಿದೆ. ಜಾಗತಿಕವಾಗಿ ಹಲವು ರಾಷ್ಟ್ರಗಳಲ್ಲಿ ತನ್ನದೆ ಆದ ಪ್ರಾಬಲ್ಯವನ್ನು ಸಾಧಿಸಿದೆ. ಇದಕ್ಕೆ ಅನುಗುಣವಾಗಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ತನ್ನ ಹೊಸ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಉಕ್ರೇನ್‌ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ Exynos 1330 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ!..6000mAh ಬ್ಯಾಟರಿ ಸಾಮರ್ಥ್ಯ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಡಿಸ್‌ಪ್ಲೇ ವಿಶೇ‍ಷ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್‌ ಹೆಚ್‌ಡಿ PLS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2408x1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ Exynos 1330 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ!..6000mAh ಬ್ಯಾಟರಿ ಸಾಮರ್ಥ್ಯ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಕ್ಯಾಮೆರಾ ಸೆಟ್‌ಅಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದು ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಅನ್ನು ಹೊಂದಿದ್ದು,25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, Wi-Fi, ಬ್ಲೂಟೂತ್ 5.2, NFC ಮತ್ತು GPS ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ!..6000mAh ಬ್ಯಾಟರಿ ಸಾಮರ್ಥ್ಯ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 4GB + 64GB ರೂಪಾಂತರದ ಆಯ್ಕೆಗೆ ಉಕ್ರೇನ್‌ನಲ್ಲಿ UAH 8,299 (ಅಂದಾಜು 18,300ರೂ)ಬೆಲೆ ಪಡೆದಿದೆ. ಇದರ 4GB + 128GB ಕಾನ್ಫಿಗರೇಶನ್ ಆಯ್ಕೆಯು UAH 8,999 (ಅಂದಾಜು 19,900ರೂ)ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ನೀಲಿ, ಗಾಢ ನೀಲಿ ಮತ್ತು ಬೆಳ್ಳಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಇದಲ್ಲದೆ ಸ್ಯಾಮ್‌ಸಂಗ್‌ ಕಂಪೆನಿ ಇತ್ತೀಚಿಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದ್ದು, ಆಂಡ್ರಾಯ್ಡ್‌ 13 One UI 5.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Galaxy M14 5G features a triple-rear camera setup with a 50-megapixel primary sensor with an f/1.8 aperture.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+