Home
ಸುದ್ದಿಜಾಲ

ಅಗ್ಗದ ಬೆಲೆಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G ಬಿಡುಗಡೆ!..ಬಿಗ್‌ ಬ್ಯಾಟರಿ ಸೌಲಭ್ಯ!

ಸ್ಯಾಮ್‌ಸಂಗ್ ಮೊಬೈಲ್‌ ಕಂಪನಿಯು ದೇಶಿಯ ಮಾರುಕಟ್ಟೆಗೆ ನೂತನವಾಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಗ್ಯಾಲಕ್ಸಿ M ಸರಣಿಯಲ್ಲಿ ಲಾಂಚ್ ಆಗಿರುವ ಈ ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಪರಿಚಯವಾಗಿದೆ. ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

ಹೌದು, ಸ್ಯಾಮ್‌ಸಂಗ್‌ ಕಂಪನಿಯು ಭಾರತೀಯ ಮಾರುಕಟ್ಟೆಗೆ ಹೊಸದಾಗಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G ಮೊಬೈಲ್‌ ಅನ್ನು ಲಾಂಚ್‌ ಮಾಡಿದೆ. ಈ ಫೋನ್‌ 4GB RAM + 128GB ಹಾಗೂ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗೆಯೇ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಪ್ಲಸ್‌ ಪಾಯಿಂಟ್‌ ಎನಿಸಿದೆ.

ಅಗ್ಗದ ಬೆಲೆಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G ಬಿಡುಗಡೆ!..ಬಿಗ್‌ ಬ್ಯಾಟರಿ

ಹಾಗೆಯೇ ಈ ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಇನ್ನು ಈ ಫೋನ್‌ ಬ್ಲೂ ಟೋಪಾಜ್, ಸೆಲೆಸ್ಟಿಯಲ್ ಬ್ಲೂ ಮತ್ತು ಸ್ಟೋನ್ ಗ್ರೇ ಬಣ್ಣಗಳ ಆಯ್ಕೆಗಳನ್ನು ಖರೀದಿಗೆ ಲಭ್ಯ ಆಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G - ಫೀಚರ್ಸ್

ಹೊಸ ಗ್ಯಾಲಕ್ಸಿ M15 ಮೊಬೈಲ್ 6.5 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1080 × 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಹೊಂದಿದ್ದು, 1000 nits ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಪಡೆದಿದೆ.

ಅಗ್ಗದ ಬೆಲೆಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G ಬಿಡುಗಡೆ!..ಬಿಗ್‌ ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಮೊಬೈಲ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪವರ್‌ ಅನ್ನು ಪಡೆದಿದ್ದು, ಇದರ ಜೊತೆಗೆ ಆಂಡ್ರಾಯ್ಡ್‌ 14 ಸಓಎಸ್‌ ಸಪೋರ್ಟ್‌ ಇದೆ. ಇನ್ನು ಈ ಫೋನ್ 4GB RAM + 128GB ಹಾಗೂ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 1 TB ವರೆಗೂ ವಿಸ್ತರಿಸುವ ಆಯ್ಕೆ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಮೊಬೈಲ್‌ ಟ್ರಿಪಲ್‌ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿ ಇದೆ. ಎರಡನೇ ಕ್ಯಾಮೆರಾವು 5 ಮೆಗಾ ಪಿಕ್ಸಲ್‌ ಹಾಗೂ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಮೊಬೈಲ್‌ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇದರೊಂದಿಗೆ ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ ಆಯ್ಕೆಗಳ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳು ಹಾಗೂ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಆಯ್ಕೆ ಸಹ ಇವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M15 5G ಮೊಬೈಲ್‌ 4GB RAM + 128GB ಹಾಗೂ 6GB RAM + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಪಡೆದಿದೆ. 4GB RAM + 128GB ವೇರಿಯಂಟ್‌ 13,299 ರೂ. ಗಳ ಬೆಲೆ ಇದ್ದು, 8GB + 256GB ವೇರಿಯಂಟ್‌ 14,799ರೂ. ಗಳ ಬೆಲೆ ಹೊಂದಿದೆ. ಇನ್ನು ಇದು ಅಮೆಜಾನ್‌ ಹಾಗೂ ಸ್ಯಾಮ್‌ಸಂಗ್‌ ವೆಬ್‌ಸೈಟ್‌ ಮೂಲಕ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Samsung Galaxy M15 5G Launched in India. Check Price, Specifications and sale details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+