ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಹೊಸ ಆವೃತ್ತಿಯಲ್ಲಿ ಎಂಟ್ರಿ!..ಜುಲೈ 21ರಿಂದ ಲಭ್ಯ!

|

ದಕ್ಷಿಣ ಕೊರಿಯಾದ ಸ್ಮಾರ್ಟ್‌ಫೋನ್ ತಯಾರಿಕಾ ದಿಗ್ಗಜ ಸ್ಯಾಮ್‌ಸಂಗ್ ಸಂಸ್ಥೆಯು ಇದೀಗ ನೂತನವಾಗಿ ಗ್ಯಾಲಕ್ಸಿ M21 2021 ಎಡಿಷನ್ ಆವೃತ್ತಿಯನ್ನು ಅನಾವರಣ ಮಾಡಿದೆ. ಈಗಾಗಲೇ ಸಂಸ್ಥೆಯು ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದ್ದು, ಅದರ ಮುಂದುವರಿದ ಭಾಗವಾಗಿ ಈಗ ಗ್ಯಾಲಕ್ಸಿ M21 2021 ಆವೃತ್ತಿ ಪರಿಚಯ ಮಾಡಿದೆ. ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರುವುದು ಪ್ರಮುಖ ಆಕರ್ಷಕ ಫೀಚರ್ಸ್‌ಗಳಲ್ಲಿ ಒಂದಾಗಿದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಕಂಪನಿಯು ಈಗ ಗ್ಯಾಲಕ್ಸಿ M21 2021 ಎಡಿಷನ್ ಆವೃತ್ತಿ ಭಾರತದಲ್ಲಿ ಅನಾವರಣ ಮಾಡಿದೆ. ನಿರೀಕ್ಷೆಯಂತೆ ಇದೊಂದು ಬಜೆಟ್ ಸ್ಮಾರ್ಟ್‌ಫೋನ್ ಆಗಿದ್ದು, 6,000mAh ಬ್ಯಾಟರಿ, 48ಎಂಪಿ ರಿಯರ್ ಕ್ಯಾಮೆರಾ, AMOLED ಮಾದರಿಯ ಡಿಸ್‌ಪ್ಲೇ ಗಳಂತಹ ಆಕರ್ಷಕ ಫೀಚರ್ಸ್‌ಗಳಿಂದ ಹೈಕ್ಲಾಸ್ ಲುಕ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಇದೇ ಜುಲೈ 21ರಂದು ಮಧ್ಯಾಹ್ನ 12 ಗಂಟೆಗೆ ಇ-ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ವಿನ್ಯಾಸ ಹೇಗಿದೆ

ಡಿಸ್‌ಪ್ಲೇ ವಿನ್ಯಾಸ ಹೇಗಿದೆ

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಹಾಗೂ ಸ್ಕ್ರೀನ್‌ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್‌ ಪವರ್‌ ಏನು

ಪ್ರೊಸೆಸರ್‌ ಪವರ್‌ ಏನು

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G72 MP3 GPU ಪಡೆದಿದೆ. ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ಯಾಮೆರಾ ರಚನೆ ಮತ್ತು ಸೆನ್ಸಾರ್

ಕ್ಯಾಮೆರಾ ರಚನೆ ಮತ್ತು ಸೆನ್ಸಾರ್

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5 ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20 ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

Best Mobiles in India

English summary
Galaxy M21 2021 Edition launch date for India has been confirmed. The company will be announcing the smartphone at 12pm on July 21st.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X