ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಫೋನಿನ ಫಸ್ಟ್ ಸೇಲ್!.ಇದೆ ಬೆಸ್ಟ್ ಆಫರ್!
ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಷ್ಟೆ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಬಜೆಟ್ ಬೆಲೆಯಲ್ಲಿರುವ ಈ ಫೋನ್ ಇ ಕಾಮರ್ಸ್ ತಾಣ ಅಮೆಜಾನ್ ಮತ್ತು ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಇಂದು(ಮಾ.23) ಮೊದಲ ಸೇಲ್ ನಡೆಸಲಿದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆಯು 13,499ರೂ.ಆಗಿದ್ದು, ಅಮೆಜಾನ್ ತಾಣದಲ್ಲಿ ಮಾರ್ಚ್ 31ರ ವರೆಗೂ ಗ್ರಾಹಕರಿಗೆ 500.ರೂ ಡಿಸ್ಕೌಂಟ್ ಲಭ್ಯವಾಗಲಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ಹೊಸ ಗ್ಯಾಲಕ್ಸಿ ಎಂ21 ಫೋನ್ ಇಂದು ಫಸ್ಟ್ ಸೇಲ್ ಶುರುಮಾಡಲಿದೆ. ಇನ್ನು ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, ಅವು ಕ್ರಮವಾಗಿ 4GB+ 64GB (13,499ರೂ)ಮತ್ತು 6GB + 128GB (15,499) ಸಾಮರ್ಥ್ಯದಲ್ಲಿವೆ. ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಹಾಗೂ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್ ಬಲ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G72 MP3 GPU ಪಡೆದಿದೆ. ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ಯಾಮೆರಾ ವಿನ್ಯಾಸ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.


Click it and Unblock the Notifications








