Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಫೋನ್ ಬೆಲೆಯಲ್ಲಿ ಭಾರಿ ಇಳಿಕೆ!

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌, 6,000mAh ಸಾಮರ್ಥ್ಯದ ಬ್ಯಾಟರಿ, ವೇಗದ ಪ್ರೊಸೆಸರ್‌ ಮತ್ತು ಆಕರ್ಷಕ ಡಿಸೈನ್‌ನಂತಹ ಫೀಚರ್ಸ್‌ಗಳಿಂದ ಹೈಲೈಟ್‌ ಆಗಿದ್ದ ಈ ಸ್ಮಾರ್ಟ್‌ಫೋನ್‌ ಇದೀಗ ಬೆಲೆ ಕಡಿತವಾಗಿದ್ದು, ಮತ್ತೆ ಗ್ರಾಹಕರ ಗಮನವನ್ನು ಸೆಳೆದಿದೆ.

ಗ್ಯಾಲಕ್ಸಿ M21

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಫೋನ್ ಬೇಸ್‌ ವೇರಿಯಂಟ್‌ 12,999ರೂ.ಗಳಿಗೆ ಲಾಂಚ್ ಆಗಿತ್ತು. ಆದರೆ ಇತ್ತೀಚಿಗಷ್ಟೆ GST ದರ ಹೆಚ್ಚಳದಿಂದಾಗಿ 64GB ಸ್ಟೋರೇಜ್‌ನ ಬೇಸ್‌ ವೇರಿಯಂಟ್‌ ಬೆಲೆಯು 14,222ರೂ.ಗಳಾಗಿತ್ತು. ಆದ್ರೆ ಇದೀಗ ಬೆಲೆ ಇಳಿಕೆಯಿಂದಾಗಿ 64GB ಸ್ಟೋರೇಜ್‌ನ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 13,199ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ 128GB ಸ್ಟೋರೇಜ್‌ ವೇರಿಯಂಟ್ ಬೆಲೆಯು 15,499ರೂ.ಆಗಿದೆ. ಅಮೆಜಾನ್‌ ತಾಣದಲ್ಲಿ ಲಭ್ಯವಾಗಲಿದ್ದು, ಆದರೆ ಸದ್ಯ ಲಾಕ್‌ಡೌನ್‌ ಇರುವುದರಿಂದ ಮೊಬೈಲ್ ಮಾರಾಟಕ್ಕೆ ಅನುಮತಿ ಇಲ್ಲ. ಅನುಮತಿ ದೊರೆತ ನಂತರ ಗ್ರಾಹಕರು ಖರೀದಿಸಬಹುದಾಗಿದೆ. ಹಾಗಾದರೆ ಗ್ಯಾಲಕ್ಸಿ M21 ಫೋನ್ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಹಾಗೂ ಸ್ಕ್ರೀನ್‌ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G72 MP3 GPU ಪಡೆದಿದೆ. ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 4GB RAM + 64GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 13,199ರೂ. ಆಗಿದೆ. ಹಾಗೆಯೇ 6GB RAM + 128GB ವೇರಿಯಂಟ್ ಬೆಲೆಯು 15,499ರೂ. ಆಗಿದೆ. ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ.

Best Mobiles in India

English summary
Samsung Galaxy M21 4GB+64GB storage model price starts at Rs 13,199.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+