ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಲಾಂಚ್!..ಬೆಲೆ ಕೇವಲ 12,999ರೂ.!
ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಇಂದು (ಮಾ.18) ಬಿಡುಗಡೆ ಮಾಡಿದೆ. ಗ್ಯಾಲಕ್ಸಿ M ಸರಣಿಯಲ್ಲಿ ಲಾಂಚ್ ಆಗಿರುವ ಈ ಸ್ಮಾರ್ಟ್‌ಫೋನ್ ಇತ್ತೀಚಿಗೆ ಬಿಡುಗಡೆ ಆಗಿರುವ ಗ್ಯಾಲಕ್ಸಿ M31 ಫೋನ್‌ನಂತೆ ಕಂಡು ಬಂದರೂ ಹಲವು ಭಿನ್ನತೆಗಳನ್ನು ಹೊಂದಿದೆ. ಮುಖ್ಯವಾಗಿ ತ್ರಿವಳಿ ಕ್ಯಾಮೆರಾ ರಚನೆ, ಬಿಗ್ ಬ್ಯಾಟರಿ ಬಾಳಿಕೆಯನ್ನು ಪಡೆದಿರುವುದು ಈ ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಇಂದು ಬಿಡುಗಡೆ ಆಗಿದೆ. ನಿರೀಕ್ಷೆಯಂತೆ ಇದೊಂದು ಬಜೆಟ್ ಸ್ಮಾರ್ಟ್‌ಫೋನ್ ಆಗಿದ್ದು, 6,000mAh ಬ್ಯಾಟರಿ, 48ಎಂಪಿ ರಿಯರ್ ಕ್ಯಾಮೆರಾ, AMOLED ಮಾದರಿಯ ಡಿಸ್‌ಪ್ಲೇ ಗಳಂತಹ ಆಕರ್ಷಕ ಫೀಚರ್ಸ್‌ಗಳಿಂದ ಹೈಕ್ಲಾಸ್ ಲುಕ್ ಹೊಂದಿದೆ. ಇನ್ನು ಈ ಫೋನಿನ ಬೇಸ್ ವೇರಿಯಂಟ್ ಬೆಲೆಯು 12,999ರೂ.ಆಗಿದ್ದು, ಇದೇ ಮಾರ್ಚ್ 23ರಂದು ಫಸ್ಟ್ ಸೇಲ್ ಆರಂಭವಾಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಹಾಗೂ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್ ಬಲ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G72 MP3 GPU ಪಡೆದಿದೆ. ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ಯಾಮೆರಾ ವಿನ್ಯಾಸ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 4GB RAM + 64GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 12,999ರೂ. ಆಗಿದೆ. ಹಾಗೆಯೇ 6GB RAM + 128GB ವೇರಿಯಂಟ್ ಬೆಲೆಯನ್ನು ಅಧಿಕೃತವಾಗಿ ಕಂಪನಿ ಇನ್ನೂ ರೀವಿಲ್ ಮಾಡಿಲ್ಲ. ಇದೇ ಮಾರ್ಚ್ 23ರಂದು ಸೇಲ್ ಶುರುವಾಗಲಿದೆ. ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








