ಇಂದಿನಿಂದ ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸೇಲ್ ಆರಂಭ!.ಬೆಲೆ 14,999ರೂ!

|

ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್ ಇಂದು (ಮಾ.5) ಮಧ್ಯಾಹ್ನ 12ರಿಂದ ಸೇಲ್ ಆರಂಭಿಸಲಿದೆ. ಕ್ವಾಡ್‌ ಕ್ಯಾಮೆರಾ, 6000mAh ಬ್ಯಾಟರಿ, ಆಂಡ್ರಾಯ್ಡ್ 10 ಓಎಸ್‌ ನಂತಹ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಇನ್ನು ಈ ಫೋನ್ 6GB RAM ಜೊತೆಗೆ 64GB ಮತ್ತು 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಹೊಂದಿದ್ದು, ಎರಡು ವೇರಿಯಂಟ್ ಫೋನ್‌ ಖರೀದಿಗೆ ಲಭ್ಯವಾಗಲಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್ Exynos 9 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 10 ಹಾಗೂ UI 2.0 ಸ್ಕೀನ್ ಓಎಸ್‌ ಸಫೋರ್ಟ್‌ ಪಡೆದಿದೆ. ಹಾಗೆಯೇ ಡಿಸೈನ್‌ನಿಂದಲೂ ಗಮನ ಸೆಳೆದಿರುವ ಈ ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಬಿಡುಗಡೆ ಆಗಿರುವುದು ಮತ್ತೊಂದು ಪ್ಲಸ್‌ ಪಾಯಿಂಟ್‌ ಆಗಿದೆ. ಈ ಫೋನಿನ ಆರಂಭಿಕ ಬೆಲೆಯು 14,999ರೂ. ಆಗಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ತಿಳಿಯಲು ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ ಎಂ31 ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಇನ್‌ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸೂಪರ್‌ ಅಮೋಲ್ಡ್‌ಸ್ಕ್ರೀನ್‌ ಹೊಂದಿದೆ. ಹಾಗೆಯೇ 19.5:9ನಷ್ಟು ಡಿಸ್‌ಪ್ಲೇ ಅನುಪಾತವನ್ನು ಒಳಗೊಂಡಿದ್ದು, ಇದಲ್ಲದೆ ಈ ಡಿಸ್‌ಪ್ಲೇ ವಾಟರ್‌ಡ್ರಾಪ್‌ ನಾಚ್‌ ಶೈಲಿಯ ವಿನ್ಯಾಸವನ್ನು ಹೊಂದಿದ್ದು ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್‌ ಕಾರ್ಯ

ಪ್ರೊಸೆಸರ್‌ ಕಾರ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 6GB RAM ಮತ್ತು 64GB ಶೇಖರಣಾ ಸಾಮರ್ಥ್ಯ ಹಾಗೂ 6GB RAM ಮತ್ತು 128GB ಸಾಮರ್ಥ್ಯ ಹೊಂದಿರುವ ವೆರಿಯೆಂಟ್‌ ಆಯ್ಕೆ ಹೊಂದಿದೆ. ಮೆಮೊರಿ ಕಾರ್ಡ ಮೂಲಕ 512GB ವರೆಗೆ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ವಾಡ್ ಕ್ಯಾಮೆರಾ

ಕ್ವಾಡ್ ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸ್ಯಾಮ್‌ಸಂಗ್ ISOCELL ಬ್ರೈಟ್‌ GW1 ಸೆನ್ಸಾರ್‌ ಜೊತೆಗೆ f/ 1.8 ಲೆನ್ಸ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್ f/ 2.2 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿವೆ. 32 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಸ್ಯಾಮ್‌ಸಂಗ್ ಗ್ಯಾಲಕ್ಸಿ m31 ಸ್ಮಾರ್ಟ್‌ಫೋನ್ ಒಟ್ಟು 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಒಂದೇ ಚಾರ್ಜ್‌ನಲ್ಲಿ 26 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಹಾಗೂ 119 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್ ಅನ್ನು ನೀಡಲಿದೆ. ಅಲ್ಲದೆ ಇದು 15W ವೇಗದ ಚಾರ್ಜಿಂಗ್‌ಅನ್ನು ಬೆಂಬಲಿಸಲಿದೆ. ಚಾರ್ಜ್‌ ವೇಗವಾಗಿ ಪಡೆದುಕೊಳ್ಳುತ್ತದೆ ಮತ್ತು ಉತ್ತಮ ಬ್ಯಾಕ್‌ಅಪ್ ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು

ಬೆಲೆ ಎಷ್ಟು

ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್ ಇಂದಿನಿಂದ ಮಾರಾಟ ಆರಂಭಿಸಲಿದೆ. 64GB ಶೇಖರಣಾ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ ಬೆಲೆ 14,999 ರೂ, ಹಾಗೂ 128GB ಶೇಖರಣಾ ಸಾಮರ್ಥ್ಯದ ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ 15,999 ರೂ. ಆಗಿದೆ. ಓಷನ್ ಬ್ಲೂ ಮತ್ತು ಸ್ಪೇಸ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿವೆ.

Best Mobiles in India

English summary
Galaxy M31 is the newest big battery smartphone from Samsung. It also features a quad rear camera setup with 64-megapixel main shooter.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X