ಭಾರತದಲ್ಲಿ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ M31 ಪ್ರೈಮ್ ಆವೃತ್ತಿ ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಸಂಸ್ಥೆ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ M ಸರಣಿಯಲ್ಲಿ ಮತ್ತೊಂದು ಸ್ಮಾರ್ಟ್‌ಫೋನ್ ಗ್ಯಾಲಕ್ಸಿ M31 ಪ್ರೈಮ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ m31 ಪ್ರೈಮ್ ಅನ್ನು ಅಮೆಜಾನ್.ಇನ್ ನೊಂದಿಗೆ ಜಂಟಿಯಾಗಿ ಅಭಿವೃದ್ಧಿಪಡಿಸಲಾಗಿದ್ದು, ಹಬ್ಬದ ಸೀಸನ್ ಅಂಗವಾಗಿ ಬಿಡುಗಡೆ ಮಾಡಿದೆ. ಇದು ಅಮೆಜಾನ್ ಎಕೋ ಸಿಸ್ಟಂ ವ್ಯವಸ್ಥೆಯ ಅಪ್ಲಿಕೇಶನ್‌ಗಳೊಂದಿಗೆ ಬರಲಿದ್ದು, ಈ ಸ್ಮಾರ್ಟ್‌ಫೋನ್ 3ತಿಂಗಳ ಪೂರಕ ಅಮೆಜಾನ್ ಪ್ರೈಮ್ ಸದಸ್ಯತ್ವವನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ M31 ಪ್ರೈಮ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಇನ್ಫಿನಿಟಿ-ಯು-ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಇದು ಆಕ್ಟಾ-ಕೋರ್ ಎಕ್ಸಿನೋಸ್ 9611 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್‌ನ ಗ್ರೇಟ್ ಇಂಡಿಯಾ ಫೆಸ್ಟಿವಲ್‌ನ ಮೊದಲ ದಿನದಂದು ಮಾರಾಟವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಇದು 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಇನ್ಫಿನಿಟಿ-ಯು- AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 84.1% ಬಾಡಿ ಟು ಸ್ಕ್ರೀನ್ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 19.5:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ 403ppi ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪ್ರೊಟೆಕ್ಷನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3ಯನ್ನು ಒಳಗೊಂಡಿದೆ.

ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಪ್ರೈಮ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 9611 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 64GB ಅಥವಾ 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಪ್ರೈಮ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಕ್ವಾಟರ್ನರಿ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಬ್ಲೂಟೂತ್ v5.0, ವೈಫೈ, ಹಾಟ್‌ಸ್ಪಾಟ್, ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಫಿಂಗರ್‌ಪ್ರಿಂಟ್ ಸೆನ್ಸಾರ್, ಗೈರೊ ಸೆನ್ಸಾರ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಮತ್ತು ಆಂಬಿಯೆಂಟ್ ಲೈಟ್ ಸೆನ್ಸಾರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಆಲ್‌ವೇಸ್ ಆನ್ ಇರುವ ಅಮೆಜಾನ್ ಶಾಪಿಂಗ್ ಅಪ್ಲಿಕೇಶನ್ ನೀಡಲಾಗಿದೆ. ಇದನ್ನು ಮುಖಪುಟ ಪರದೆಯ ಮೇಲೆ ಸ್ವೈಪ್ ಮಾಡುವ ಮೂಲಕ ಪ್ರವೇಶಿಸಬಹುದು. ಇದು ಲಾಕ್‌ಸ್ಕ್ರೀನ್‌ನಲ್ಲಿ ಅಮೆಜಾನ್‌ನಲ್ಲಿ ಹೊಸ ಮತ್ತು ಟ್ರೆಂಡಿಂಗ್ ಐಟಂಗಳ ನವೀಕರಣಗಳನ್ನು ಸಹ ತೋರಿಸುತ್ತದೆ. ಅಮೆಜಾನ್ ಶಾಪಿಂಗ್, ಅಮೆಜಾನ್ ಪ್ರೈಮ್ ವಿಡಿಯೋ, ಅಮೆಜಾನ್ ಪ್ರೈಮ್ ಮ್ಯೂಸಿಕ್, ಆಡಿಬಲ್ ಮತ್ತು ಕಿಂಡಲ್ ಅಪ್ಲಿಕೇಶನ್‌ಗಳನ್ನು ಒಳಗೊಂಡಿರುವ ಫೋಲ್ಡರ್ ಸಹ ಇದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ m31 ಪ್ರೈಮ್ ಬೆಲೆ 6GB RAM + 128GB ಆಯ್ಕೆಗೆ 16,499 ರೂ. ಬೆಲೆಯನ್ನು ಹೊಂದಿದೆ. ಇದು ಓಷನ್ ಬ್ಲೂ, ಸ್ಪೇಸ್ ಬ್ಲ್ಯಾಕ್, ಮತ್ತು ಐಸ್ಬರ್ಗ್ ಬ್ಲೂ ಎಂಬ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಕ್ಟೋಬರ್ 17 ರಿಂದ ಫೋನ್ ಮಾರಾಟವಾಗಲಿದೆ.


Click it and Unblock the Notifications








