ಸ್ಮಾರ್ಟ್‌ಫೋನ್ ಗ್ಯಾಲಕ್ಸಿ M31 ಪ್ರೈಮ್ ಆವೃತ್ತಿ ಫೋನ್ ಬೆಲೆ ಬಹಿರಂಗ!
ದಕ್ಷಿಣ ಕೋರಿಯಾದ ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಸಂಸ್ಥೆ ಈಗಾಗಲೇ ಹಲವು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಇನ್ನು ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ M ಸರಣಿಯಲ್ಲಿ ಮತ್ತೊಂದು ಸ್ಮಾರ್ಟ್‌ಫೋನ್ ಗ್ಯಾಲಕ್ಸಿ M31 ಪ್ರೈಮ್ ಆವೃತ್ತಿಯನ್ನು ಪರಿಚಯಿಸಲು ಸ್ಯಾಮ್‌ಸಂಗ್ ಸಂಸ್ಥೆ ಸಿದ್ದತೆ ನಡೆಸಿದೆ. ಜೊತೆಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಪ್ರೈಮ್ ಆವೃತ್ತಿಯ ಆರಂಭಿಕ ಬೆಲೆಯನ್ನು ಅಮೆಜಾನ್ ಬಹಿರಂಗಪಡಿಸಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ತನ್ನ ಗ್ಯಾಲಕ್ಸಿ M31 ಪ್ರೈಮ್ ಆವೃತ್ತಿಯ ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ ಮಾಹಿತಿ ಅಮೆಜಾನ್ ಬಹಿರಂಗಪಡಿಸಿದ್ದು, ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಇನ್ನು ಈ ಸ್ಮಾರ್ಟ್‌ಫೋನ್ 3ತಿಂಗಳ ಪೂರಕ ಅಮೆಜಾನ್ ಪ್ರೈಮ್ ಸದಸ್ಯತ್ವದೊಂದಿಗೆ ಬರಲಿದೆ. ಅಲ್ಲದೆ ಈ ಫೋನ್ ವಾಟರ್ ಡ್ರಾಪ್ ನಾಚ್, ಸ್ಲಿಮ್ ಬೆಜೆಲ್ ಮತ್ತು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಇದು 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 84.1% ಬಾಡಿ ಟು ಸ್ಕ್ರೀನ್ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 19.5:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ 403ppi ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪ್ರೊಟೆಕ್ಷನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3ಯನ್ನು ಒಳಗೊಂಡಿದೆ.

ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಪ್ರೈಮ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 9611 ಪ್ರೊಸೆಸರ್ ಹೊಂದಿರಲಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 6GB RAM ಮತ್ತು 64GB ಅಥವಾ 128GB ಸಂಗ್ರಹ ಸಾಮರ್ಥ್ಯದೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಪ್ರೈಮ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಡೆಪ್ತ್ ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಬ್ಲೂಟೂತ್ v5.0, ವೈಫೈ, ಹಾಟ್‌ಸ್ಪಾಟ್, ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಫಿಂಗರ್‌ಪ್ರಿಂಟ್ ಸೆನ್ಸಾರ್, ಗೈರೊ ಸೆನ್ಸಾರ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಮತ್ತು ಆಂಬಿಯೆಂಟ್ ಲೈಟ್ ಸೆನ್ಸಾರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ m31 ಪ್ರೈಮ್ ಬೆಲೆ 6GB RAM + 64GB ಆಯ್ಕೆಗೆ 16,999 ರೂ. ಆಗಿದೆ ಇನ್ನು ಈ ಸ್ಮಾರ್ಟ್‌ಫೋನ್ ಯಾವಾಗ ಬಿಡುಗಡೆ ಆಗಲಿದೆ ಎನ್ನುವುದರ ಮಾಹಿತಿ ಲಭ್ಯವಾಗಿಲ್ಲ.


Click it and Unblock the Notifications








