ಶೀಘ್ರದಲ್ಲೇ ಲಾಂಚ್‌ ಆಗಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌!

|

ಟೆಕ್‌ ಲೋಕದ ದಿಗ್ಗಜ ಕಂಪೆನಿಗಳಲ್ಲಿ ಒಂದಾದ ಸ್ಯಾಮ್‌ಸಂಗ್‌ ಕಂಪೆನಿ ತನ್ನ M ಸರಣಿಯ ಸ್ಮಾರ್ಟ್‌ಫೋನ್‌ಗಳ ಹೊಸ ಆವೃತ್ತಿಯನ್ನ ಪರಿಚಯಿಸಲಿದೆ ಎಂದು ಹೇಳಲಾಗ್ತಿದೆ. ಈಗಾಗ್ಲೆ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಲು ಸಿದ್ದತೆ ನಡೆಸಿರೋ ಸ್ಯಾಮ್‌ಸಂಗ್‌ ಕಂಪೆನಿ, ಶೀಘ್ರದಲ್ಲೇ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಸದ್ಯ ಇದಕ್ಕೆ ಸಂಬಂಧಪಟ್ಟಂತೆ ಭಾರತದ ಯುಟ್ಯೂಬರ್‌ಗಳು ಟೀಸರ್‌ ಬಿಟ್ಟಿದ್ದು, ಟ್ವಿಟ್ಟರ್‌ನಲ್ಲಿ ಟ್ವಿಟ್‌ ಮಾಡಿದ್ದಾರೆ.

ಹೌದು

ಹೌದು, ದಕ್ಷಿಣ ಕೋರಿಯಾದ ಸ್ಮಾರ್ಟ್‌ಫೋನ್‌ ಕಂಪೆನಿ ಸ್ಯಾಮ್‌ಸಂಗ್‌ ತನ್ನ ಹೊಸ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ M31 ಅನ್ನು ಬಿಡುಗಡೆ ಮಾಡಲಿದೆ ಎಂದು ಹೇಳಲಾಗ್ತಿದೆ. ಸದ್ಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌ ಡ್ಯುಯಲ್-ಬ್ಯಾಂಡ್ ವೈ-ಫೈ ಬೆಂಬಲವನ್ನುಹೊಂದಿದ್ದು, 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಲೀಕ್‌ ಆಗಿದ್ದು,ಲೀಕ್‌ ಮಾಹಿತಿ ಪ್ರಕಾರ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್ 1080 x 2280 ಪಿಕ್ಸೆಲ್‌ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದು ಐಪಿಎಸ್ 394 ಪಿಪಿಐ ಪಿಕ್ಸೆಲ್ ಸಾಂದ್ರತೆ ಹೊಂದಿರುವ ಎಲ್‌ಸಿಡಿ ಡಿಸ್‌ಪ್ಲೇ ಆಗಿದೆ. ಅಲ್ಲದೆ ಈ ಡಿಸ್‌ಪ್ಲೇ ವಾಟರ್ಗ್ ಡ್ರಾಪ್‌ ನಾಚ್‌ ಶೈಲಿಯನ್ನ ಒಳಗೊಂಡಿದೆ. ಜೊತೆಗೆ ಮಲ್ಟಿ ಟಚ್‌ ಸ್ಕ್ರೀನ್‌ ಅನ್ನ ಹೊಂದಿದ್ದು,ಕ್ಯಾಪಸಿಟಿವ್‌ ಟಚ್‌ ಸ್ಕ್ರೀನ್‌ ಅನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಎಕ್ಸಿನೋಸ್‌(Exynos)9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 64 GB ಸ್ಟೋರೇಜ್‌ ಸಾಮರ್ಥ್ಯವನ್ನ ಒಳಗೊಂಡಿದೆ. ಅಲ್ಲದೆ ಮೆಮೊರಿ ಕಾರ್ಡ್‌ ಮೂಲಕ 512 GB ವರೆಗೆ ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಕ್ಯಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌, ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌, ಮೂರನೇ ಕ್ಯಾಮೆರಾ 5ಮೆಗಾ ಪಿಕ್ಸೆಲ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ 6ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇನ್ನು ಈ ಕ್ಯಾಮೆರಾಗಳಲ್ಲಿ ಡಿಜಿಟಲ್‌ ಜೂಮ್‌,ಆಟೋ ಫ್ಲಾಶ್‌, ಫೇಸ್‌ ಡಿಟೆಕ್ಷನ್‌, ಟಚ್‌ ದಿ ಫೋಕಸ್‌ ಫೀಚರ್ಸ್‌ಗಳನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M31 5000 mAh ಬ್ಯಾಟರಿ ಪ್ಯಾಕ್‌ಆಪ್‌ ಅನ್ನು ಹೊಂದಿದ್ದು, ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್‌,ಜಿಪಿಎಸ್‌, ವೋಲ್ಟ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Samsung Galaxy M31 teasers have been posted on Twitter by Indian YouTubers.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X