ಇಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಫೋನಿನ ಫಸ್ಟ್ ಸೇಲ್‌!..ಬೆಲೆ ಎಷ್ಟು?

|

ಸ್ಯಾಮ್‌ಸಂಗ್ ಸಂಸ್ಥೆ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್ ಹೈ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್‌ ಸೇಲ್ ನಡೆಯಲಿದೆ. 6,000mAh ಸಾಮರ್ಥ್ಯದ ಬ್ಯಾಟರಿ ಹಾಗೂ 64ಎಂಪಿ ಸೆನ್ಸಾರ್ ಕ್ಯಾಮೆರಾ ಈ ಫೋನಿನ ಆಕರ್ಷಕ ಫೀಚರ್ಸ್‌ಗಳಾಗಿವೆ.

M31s

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಇಂದು ಮೊದಲ ಮಾರಾಟ ಶುರು ಮಾಡಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಹೊಂದಿದ್ದು, 6GB + 128GB ವೇರಿಯಂಟ್ ಬೆಲೆಯು 19,499ರೂ. ಆಗಿದೆ. ಹಾಗೆಯೇ 8GB + 128GB ವೇರಿಯಂಟ್‌ ಬೆಲೆಯು 21,499ರೂ. ಗಳಾಗಿದೆ. ಬ್ಲ್ಯಾಕ್ ಹಾಗೂ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ದೊರೆಯಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ sAMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದ್ದು, 420ನಿಟ್ಸ್ ಸಾಮರ್ಥ್ಯದ ಬ್ರೈಟ್ನೆಸ್ ವ್ಯವಸ್ಥೆ ಪಡೆದಿದೆ. ಹಾಗೂ ಪಂಚ್ ಹೋಲ್ ಡಿಸ್‌ಪ್ಲೇ ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್‌ ದಕ್ಷತೆ

ಪ್ರೊಸೆಸರ್‌ ದಕ್ಷತೆ

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಹಾಗೂ 480fps ಸ್ಲೋ ಮೋಷನ್ ರೆಕಾರ್ಡಿಂಗ್ ಆಯ್ಕೆಗಳಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 10 ಓಎಸ್‌, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

Most Read Articles
Best Mobiles in India

English summary
Samsung Galaxy M31s is priced at Rs. 19,499 for the base 6GB + 128GB variant while the 8GB + 128GB variant is priced at Rs. 21,499.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X