Home
ಸುದ್ದಿಜಾಲ

ಸದ್ಯದಲ್ಲೇ ಎಂಟ್ರಿ ಕೊಡಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್!

ಭಾರತೀಯ ಮೊಬೈಲ್ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಹೊಸದೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈಗಾಗಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಬಜೆಟ್‌ ದರದ ಫೋನ್‌ಗಳನ್ನು ಪರಿಚಯಿಸಿದೆ. ಆ ಲಿಸ್ಟ್‌ಗೆ ಈಗ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಸೇರ್ಪಡೆ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6GB RAM ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎಂದು ಹೇಳಲಾಗ್ತಿದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಇದೇ ತಿಂಗಳ ಅಂತ್ಯದೊಳಗೆ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಅನಾವರಣ ಮಾಡಲಿದೆ ಎಂದಿದೆ. ಹಾಗೆಯೇ ಅಗಷ್ಟ ತಿಂಗಳಿನಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುವುದು ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರುವ ನಿರೀಕ್ಷೆಗಳಿವೆ.

ಸ್ಮಾರ್ಟ್‌ಫೋನ್

ಈ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.4 ಇಂಚಿನ ಸೂಪರ್‌ AMOLED ಡಿಸ್‌ಪ್ಲೇಯನ್ನು ಪಡೆದಿರಲಿದೆ. ಇನ್ನು ಈ ಫೋನ್‌ ಸ್ಯಾಮ್‌ಸಂಗ್‌ನ Exynos 9611 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿರಲಿದ್ದು, ಜೊತೆಗೆ Mali-G72 MP3 GPU ಸಹ ಪಡೆದಿರಲಿದೆ. ಹಾಗೆಯೇ ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್ ಅನ್ನು ಈ ಫೋನ್‌ ಒಳಗೊಂಡಿರಲಿದೆ.

ಕ್ಯಾಮೆರಾ ರಚನೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇರುವ ನಿರೀಕ್ಷೆಗಳಿವೆ.

6,000mAh

ಇತ್ತೀಚಿನ ಸ್ಯಾಮ್‌ಸಂಗ್ ಫೋನ್‌ಗಳು ಅಧಿಕ ಬ್ಯಾಟರಿ ಸಾಮರ್ಥ್ಯ ಹೊಂದಿವೆ. ಅದೇ ರೀತಿ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಸಹ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದೆ. ಇದರೊಂದಿಗೆ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯ ಸಹ ಇರಲಿದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಬೆಲೆಯು 20,000ರೂ. ಪ್ರೈಸ್‌ಟ್ಯಾಗ್‌ನಲ್ಲಿಯೇ ಇರಲಿದೆ ಎಂದು ಹೇಳಲಾಗಿದೆ.

Best Mobiles in India

English summary
The new M31s is expected to launch at a price of around Rs 20,000.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+