ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಬೆಲೆ ಇಳಿಕೆ!..ಹೆಚ್ಚುವರಿ ಡಿಸ್ಕೌಂಟ್ ಸಹ ಸಿಗುತ್ತೆ!
ದಕ್ಷಿಣ ಕೊರಿಯಾ ಟೆಕ್ ಸಂಸ್ಥೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಫೋನ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡಿವೆ. ಆ ಪೈಕಿ M ಸರಣಿಯ ಬಹುತೇಕ ಫೋನ್‌ಗಳು ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಅವುಗಳಲ್ಲಿ ಗ್ಯಾಲಕ್ಸಿ M32 ಫೋನ್ ಹೆಚ್ಚಿನ ಗಮನ ಸೆಳೆದಿದೆ. ಸದ್ಯ ಈ ಫೋನ್ ಅಮೆಜಾನ್ ನಲ್ಲಿ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಮತ್ತೊಮ್ಮೆ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ.

ಹೌದು, ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನ್ ಈಗ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. 4GB RAM + 64GB ಸ್ಟೋರೇಜ್ ವೇರಿಯಂಟ್ 13,499ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆ ಸಹ ಸಿಗಲಿದ್ದು, ಜೊತೆಗೆ ಎಕ್ಸ್‌ಚೇಂಜ್ ಕೊಡುಗೆಯು ಸಹ ದೊರೆಯುತ್ತದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ ಬ್ರೈಟ್‌ನೆಸ್ ಹೊಂದಿದ್ದು, 90Hz ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಸಹ ಬೆಂಬಲಿಸುತ್ತದೆ.

ಪ್ರೊಸೆಸರ್ ಪವರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ನಲ್ ಸ್ಟೋರೇಜ್ ಆಯ್ಕೆ ಅನ್ನು ಒಳಗೊಂಡಿದೆ.

ಕ್ವಾಡ್ ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಕ್ವಾಡ್-ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಆದಾಗ್ಯೂ, ಬ್ರ್ಯಾಂಡ್ ಪ್ರಸ್ತುತ ಬಾಕ್ಸ್‌ನಲ್ಲಿ 15W ಚಾರ್ಜರ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLte, ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ.

ಬೆಲೆ, ಲಭ್ಯತೆ ಹಾಗೂ ಕಲರ್ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM ಮತ್ತು 64 GB ಇಂಟರ್ ಸ್ಟೋರೇಜ್ ಆಯ್ಕೆ ಹಾಗೂ 6 GB RAM ಮತ್ತು 128 GB ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಅಮೆಜಾನ್‌ನಿಂದ ಖರೀದಿಸಲು ಸ್ಮಾರ್ಟ್‌ಫೋನ್ ಲಭ್ಯವಿರುತ್ತದೆ. ಇದು ಕಪ್ಪು, ಬಿಳಿ ಮತ್ತು ನೀಲಿ ಸೇರಿದಂತೆ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








