ಸ್ಯಾಮ್‌ಸಂಗ್ ಫೋನ್ ಖರೀದಿಸುವ ಪ್ಲ್ಯಾನ್ ಇದೆಯಾ?..ಹಾಗಿದ್ರೆ, ತಡಮಾಡದಿರಿ!
ಟೆಕ್ ದೈತ್ಯ ಎಂದು ಬಿಂಬಿತವಾಗಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಬಜೆಟ್ ಬೆಲೆಯಲ್ಲಿ ಆಕರ್ಷಕ ಫೀಚರ್ಸ್‌ಗಳೊಂದಿಗೆ ಸ್ಮಾರ್ಟ್‌ಫೋನ್ ಪ್ರಿಯರನ್ನು ಸೆಳೆದಿದೆ. ಆದ್ರೆ ಗ್ಯಾಲಕ್ಸಿ M32 ಇದೀಗ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ಮತ್ತೆ ಮತ್ತೆ ತಿರುಗಿ ನೋಡುವಂತಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನ್ 90Hz ಸೂಪರ್ AMOLED ಪ್ಲಸ್ ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಹಾಗೂ 6GB RAM ಮತ್ತು 128GB ವೇರಿಯಂಟ್ ಆಯ್ಕೆಗಳನ್ನು ಇದು ಹೊಂದಿದೆ. ಇಂತಹ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಫೋನ್ ಕಳೆದ ವರ್ಷ 14,999 ರೂ. ಗಳ ಆರಂಭಿಕ ಬೆಲೆಯೊಂದಿಗೆ ಮಾರುಕಟ್ಟೆಗೆ ಲಗ್ಗೆ ನೀಡಿತ್ತು. ಆದ್ರೆ ಈಗ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನ್ ಇದೀಗ 2000 ರೂ. ಗಳ ಭರ್ಜರಿ ರಿಯಾಯಿತಿ ಪಡೆದಿದೆ. ಡಿಸ್ಕೌಂಟ್ ಬಳಿಕ 4GB RAM ಮತ್ತು 64GB ವೇರಿಯಂಟ್ ಫೋನ್ 12,999 ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ 6GB RAM ಮತ್ತು 128GB ವೇರಿಯಂಟ್ ಮಾಡೆಲ್ 14,999 ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಆದರೆ ಇದು ಶಾಶ್ವತ ಬೆಲೆ ಇಳಿಕೆಯೇ ಅಥವಾ ಸಿಮೀತ ಅವಧಿಯ (ತಾತ್ಕಾಲಿಕ) ಬೆಲೆ ಕಡಿತವೇ ಎಂಬುದು ಸ್ಪಷ್ಟವಾಗಿಲ್ಲ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಫೋನಿನ ಹೊಸ ಬೆಲೆಯು ಕಂಪನಿಯ ಅಧಿಕೃತ ಇ-ಸ್ಟೋರ್‌ನಲ್ಲಿ ಕಾಣಬಹುದು. ಹಾಗೆಯೇ ಗ್ರಾಹಕರು ಈ ಫೋನ್ ತಿಳಿ ನೀಲಿ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಇನ್ನು ಈ ಫೋನ್ 6,000mAh ಬ್ಯಾಟರಿಯನ್ನು 15W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಪ್ಯಾಕ್ ಮಾಡುತ್ತದೆ. ಫೋನ್ 130 ಗಂಟೆಗಳ ಸಂಗೀತ ಪ್ಲೇಬ್ಯಾಕ್, 40 ಗಂಟೆಗಳ ಟಾಕ್ ಟೈಮ್ ಮತ್ತು 25 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ನೀಡುತ್ತದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ ಬ್ರೈಟ್‌ನೆಸ್ ಹೊಂದಿದ್ದು, 90Hz ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಸಹ ಬೆಂಬಲಿಸುತ್ತದೆ.

ಪ್ರೊಸೆಸರ್ ಪವರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 4GB RAM ಮತ್ತು 64GB ಹಾಗೂ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಇದೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಕೆಲವು ಉಪಯುಕ್ತ ಫೋಟೊ ಎಡಿಟಿಂಗ್ ಆಯ್ಕೆಗಳು ಸೇರಿವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಆದಾಗ್ಯೂ, ಬ್ರ್ಯಾಂಡ್ ಪ್ರಸ್ತುತ ಪೆಟ್ಟಿಗೆಯಲ್ಲಿ 15W ಚಾರ್ಜರ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLte, ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಗೆ 14,999 ರೂ. ಹಾಗೂ 6 GB RAM ಮತ್ತು 128 GB ಸ್ಟೋರೇಜ್ ಆಯ್ಕೆಗೆ 16,999 ರೂ. ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್‌ನಿಂದ ಖರೀದಿಸಲು ಸ್ಮಾರ್ಟ್‌ಫೋನ್ ಲಭ್ಯವಿರುತ್ತದೆ. ಇದು ಕಪ್ಪು, ಬಿಳಿ ಮತ್ತು ನೀಲಿ ಸೇರಿದಂತೆ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೀಚರ್ಸ್
ಇತ್ತೀಚಿಗಷ್ಟೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಆಗಿದೆ.

ಹಾಗೆಯೇ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಒಂದು UI 3.1 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.


Click it and Unblock the Notifications








