Home
ಸುದ್ದಿಜಾಲ

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಲಾಂಚ್‌! ಬೆಲೆ ಎಷ್ಟು?

ದಕ್ಷಿಣ ಕೋರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್ ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಸದ್ಯ ಇದೀಗ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಹೊಸ ಗ್ಯಾಲಕ್ಸಿ m32 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಸಂಸ್ಥೆ ಭಾರತದಲ್ಲಿ ಹೊಸ ಗ್ಯಾಲಕ್ಸಿ m32 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು 6.4-ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಪಡದುಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 14,999 ರೂ. ಆಗಿದ್ದು, ಕಪ್ಪು, ಬಿಳಿ ಮತ್ತು ನೀಲಿ ಸೇರಿದಂತೆ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ m32 ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 800 ನಿಟ್ ಬ್ರೈಟ್‌ನೆಸ್‌ ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಒಳಗೊಂಡಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಸಹ ಬೆಂಬಲಿಸುತ್ತದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಗ್ಯಾಲಕ್ಸಿ m32 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್-ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ m32 ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಆದಾಗ್ಯೂ, ಬ್ರ್ಯಾಂಡ್ ಪ್ರಸ್ತುತ ಪೆಟ್ಟಿಗೆಯಲ್ಲಿ 15W ಚಾರ್ಜರ್ ಅನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VoLte, ವೈ-ಫೈ, ಬ್ಲೂಟೂತ್, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ m32 ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 14,999 ರೂ. ಹಾಗೂ 6 GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ 16,999 ರೂ. ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಿಂದ ಖರೀದಿಸಲು ಸ್ಮಾರ್ಟ್‌ಫೋನ್ ಲಭ್ಯವಿರುತ್ತದೆ. ಇದು ಕಪ್ಪು, ಬಿಳಿ ಮತ್ತು ನೀಲಿ ಸೇರಿದಂತೆ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
Samsung has finally unveiled its next-generation Galaxy M32 in India. The latest smartphone from the company comes loaded with a host of interesting features.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+