Home
ಸುದ್ದಿಜಾಲ

ಇಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಮೊದಲ ಮಾರಾಟ!..ಆಫರ್‌ ಏನು?

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಹೊಸದಾಗಿ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಈಗಾಗಲೇ ಗ್ರಾಹಕರನ್ನು ಆಕರ್ಷಿಸಿವೆ. ಇನ್ನು ಈ ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12 ರಂದು ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್‌ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಫಸ್ಟ್‌ ಸೇಲ್ ಆರಂಭಿಸಲಿದೆ. 6GB + 128GB ಆಂತರೀಕ ಸ್ಟೋರೇಜ್‌ನ ಬೇಸ್ ವೇರಿಯಂಟ್‌ನ ಆರಂಭಿಕ ಬೆಲೆಯು 18,999ರೂ. ಆಗಿದೆ.

ಸಾಮರ್ಥ್ಯದ

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಇ ಕಾಮರ್ಸ್‌ ತಾಣ ಅಮೆಜಾನ್‌ ನಲ್ಲಿ ಇಂದು ಮೊದಲ ಮಾರಾಟ ಶುರು ಮಾಡಲಿದೆ. ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD + ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಸ್ಯಾಮ್‌ಸಂಗ್‌ನ RAM ಪ್ಲಸ್ ಫೀಚರ್ಸ್‌ ಮೂಲಕ, RAM ಅನ್ನು ಅದರ 16GB ವರೆಗೆ ವಿಸ್ತರಿಸಬಹುದು.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಜೊತೆಗೆ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಎಫೆಕ್ಟ್, ಸಿಂಗಲ್ ಟೇಕ್, ಆಬ್ಜೆಕ್ಟ್ ಎರೇಸರ್ ಮತ್ತು ವೀಡಿಯೋ TNR ಮತ್ತು ವೀಡಿಯೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ ಮತ್ತು GPS ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಬೆಲೆ ಬೇಸ್‌ ಮಾಡೆಲ್‌ 6GB + 128GB ಸ್ಟೋರೇಜ್ ಮಾದರಿಗೆ 18,999ರೂ.ನಿಂದ ಪ್ರಾರಂಭವಾಗುತ್ತದೆ. ಇನ್ನು ಈ ಫೋನ್‌ 8GB + 128GB ಸ್ಟೋರೇಜ್ ಆವೃತ್ತಿಯ ಬೆಲೆ 20,499ರೂ. ಆಗಿದೆ. ಆದರೆ ಈ ಎರು ಮಾದರಿಯಗಳು ಲಾಂಚ್‌ ಆಫರ್‌ನಲ್ಲಿ ಕ್ರಮವಾಗಿ 17,999 ಮತ್ತು 19,999ರೂ.ಗಳಿಗೆ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ( ಇಂದು )ಏಪ್ರಿಲ್ 8 ರಿಂದ ಅಮೆಜಾನ್ ಮತ್ತು ಸ್ಯಾಮ್‌ಸಂಗ್ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಿರುತ್ತದೆ.

Best Mobiles in India

English summary
Samsung Galaxy M33 5G First Sale Today Via Amazon: Price, Offers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+