Home
ಸುದ್ದಿಜಾಲ

ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G!..ಇದು ಒಳ್ಳೆಯ ಚಾನ್ಸ್‌!

ಮೊಬೈಲ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಅವುಗಳಲ್ಲಿ M ಸರಣಿಯ ಬಹುತೇಕ ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಬೆಲೆಯಲ್ಲಿವೆ. ಆ ಪೈಕಿ ಗ್ಯಾಲಕ್ಸಿ M33 5G ಫೋನ್‌ ಬಜೆಟ್‌ ದರದಲ್ಲಿ 5G ಸಪೋರ್ಟ್‌ ಪಡೆದಿದ್ದು, ಹೆಚ್ಚಿನ ಗಮನ ಸೆಳೆದಿದೆ. ಆದ್ರೆ, ಇದೀಗ ಗ್ಯಾಲಕ್ಸಿ M33 5G ಫೋನ್‌ ಅಮೆಜಾನ್‌ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಮತ್ತೊಮ್ಮೆ ಗ್ರಾಹಕರನ್ನು ಆಕರ್ಷಿಸಿದೆ.

ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G!..ಇದು ಒಳ್ಳೆಯ ಚಾನ್ಸ್‌

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್‌ ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಫೋನ್‌ ಈಗ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. 24,999ರೂ. ಗಳ ಪ್ರೈಸ್‌ ಟ್ಯಾಗ್‌ ಹೊಂದಿರುವ 6GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆ ಇಳಿಕೆ ಬಳಿಕ 17,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರೊಂದಿಗೆ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆ ಸಹ ಸಿಗಲಿದ್ದು, ಜೊತೆಗೆ ಎಕ್ಸ್‌ಚೇಂಜ್ ಕೊಡುಗೆಯು ಸಹ ದೊರೆಯುತ್ತದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G!..ಇದು ಒಳ್ಳೆಯ ಚಾನ್ಸ್‌

ಗ್ಯಾಲಕ್ಸಿ M33 5G : ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD + ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಗ್ಯಾಲಕ್ಸಿ M33 5G : ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಸ್ಯಾಮ್‌ಸಂಗ್‌ನ RAM ಪ್ಲಸ್ ಫೀಚರ್ಸ್‌ ಮೂಲಕ, RAM ಅನ್ನು ಅದರ 16GB ವರೆಗೆ ವಿಸ್ತರಿಸಬಹುದು.

ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G!..ಇದು ಒಳ್ಳೆಯ ಚಾನ್ಸ್‌

ಗ್ಯಾಲಕ್ಸಿ M33 5G : ಕ್ವಾಡ್‌ ಕ್ಯಾಮೆರಾ ಸ್ಪೆಷಲ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಜೊತೆಗೆ 120-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಎಫೆಕ್ಟ್, ಸಿಂಗಲ್ ಟೇಕ್, ಆಬ್ಜೆಕ್ಟ್ ಎರೇಸರ್ ಮತ್ತು ವೀಡಿಯೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಗ್ಯಾಲಕ್ಸಿ M33 5G : ಬ್ಯಾಟರಿ ಮತ್ತು ಇತರೆ ಸೌಲಭ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ ಮತ್ತು GPS ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಹೊಂದಿದೆ.

ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G!..ಇದು ಒಳ್ಳೆಯ ಚಾನ್ಸ್‌

ಗ್ಯಾಲಕ್ಸಿ M33 5G : ವೇರಿಯಂಟ್‌ ಹಾಗೂ ಕಲರ್‌ ಆಯ್ಕೆ

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6GB + 128GB ಸ್ಟೋರೇಜ್ ಹಾಗೂ 8GB + 128GB ಸ್ಟೋರೇಜ್ ಆವೃತ್ತಿಯಗಳ ಆಯ್ಕೆ ಪಡೆದಿದೆ. ಹಾಗೆಯೇ ಇದು ಓಶಿಯನ್‌ ಬ್ಲೂ, ಎಮರಾಲ್ಡ್‌ ಬ್ರೌನ್ ಹಾಗೂ ಗ್ರೀನ್‌ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Samsung Galaxy M33 5G Price Cut on Amazon ecommerce. Samsung Galaxy M33 5G price in India starts from Rs. 17,999. know more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+