Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಜನಪ್ರಿಯ 5G ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಮೊಬೈಲ್‌ಗಳು ಅಧಿಕ ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಫೋನ್‌ ಬಜೆಟ್‌ ದರದಲ್ಲಿ 5G ಸಪೋರ್ಟ್‌ ಪಡೆದಿದ್ದು, ಆಕರ್ಷಕ ಫೀಚರ್ಸ್‌ ಪಡೆದಿದೆ. ಇದೀಗ ಗ್ಯಾಲಕ್ಸಿ M33 5G ಮೊಬೈಲ್‌ ಅಮೆಜಾನ್‌ ಇ-ಕಾಮರ್ಸ್‌ ತಾಣದಲ್ಲಿ ಸಖತ್ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಮೊಬೈಲ್‌ ಶೇ. 35% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. 25,999ರೂ. ಗಳ ಬೆಲೆ ಅನ್ನು ಹೊಂದಿರುವ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ ಈಗ 16,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಹಾಗೆಯೇ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆ ಸಹ ಸಿಗಲಿದ್ದು, ಜೊತೆಗೆ ಎಕ್ಸ್‌ಚೇಂಜ್ ಕೊಡುಗೆಯು ಸಹ ದೊರೆಯುತ್ತದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್‌ನ ಜನಪ್ರಿಯ 5G ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಗ್ಯಾಲಕ್ಸಿ M33 5G ಡಿಸ್‌ಪ್ಲೇ ರಚನೆ :
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಮೊಬೈಲ್‌ 6.6 ಇಂಚಿನ ಫುಲ್‌ HD + ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಗ್ಯಾಲಕ್ಸಿ M33 5G ಪ್ರೊಸೆಸರ್‌ ಬಲ :
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಮೊಬೈಲ್‌ ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಸ್ಯಾಮ್‌ಸಂಗ್‌ನ RAM ಪ್ಲಸ್ ಫೀಚರ್ಸ್‌ ಮೂಲಕ, RAM ಅನ್ನು ಅದರ 16GB ವರೆಗೆ ವಿಸ್ತರಿಸಬಹುದು.

ಗ್ಯಾಲಕ್ಸಿ M33 5G ಕ್ಯಾಮೆರಾ ಸೆನ್ಸಾರ್‌ :
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಮೊಬೈಲ್‌ ಕ್ವಾಡ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ದ್ವಿತೀಯ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸಾರ್ ಪಡೆದಿದ್ದು, ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ. 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಗ್ಯಾಲಕ್ಸಿ M33 5G ಬ್ಯಾಟರಿ ಮತ್ತು ಇತರೆ ಆಯ್ಕೆಗಳು :
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಇದು 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, Wi-Fi, ಬ್ಲೂಟೂತ್ ಮತ್ತು GPS ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಪಡೆದಿದೆ.

ಗ್ಯಾಲಕ್ಸಿ M33 5G ಮೆಮೊರಿ ಹಾಗೂ ಕಲರ್‌ :
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಮೊಬೈಲ್‌ 6GB + 128GB ಸ್ಟೋರೇಜ್ ಹಾಗೂ 8GB + 128GB ಸ್ಟೋರೇಜ್ ವೇರಿಯಂಟ್‌ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಫೋನ್‌ ಓಶಿಯನ್‌ ಬ್ಲೂ, ಎಮರಾಲ್ಡ್‌ ಬ್ರೌನ್ ಹಾಗೂ ಗ್ರೀನ್‌ ಬಣ್ಣಗಳ ಆಯ್ಕೆ ಪಡೆದಿದೆ.

Best Mobiles in India

English summary
Samsung Galaxy M33 5G price down on amazon website. price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+