ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಫೋನ್‌ !

|

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಫೋನ್‌ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್ ಬೆಲೆಯಲ್ಲಿ ಬರಲಿದೆ ಎನ್ನಲಾಗಿದ್ದು, ಅಮೆಜಾನ್‌ನಲ್ಲಿ ಟೀಸ್‌ ಮಾಡಲಾಗಿದೆ. ಇನ್ನು ಈ ಫೋನ್‌ ಎರಡು ಬಣ್ಣಗಳ ಆಯ್ಕೆಯಲ್ಲಿ ಬರಲಿದೆ ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಭಾರತದಲ್ಲಿ ಹೊಸ ಗ್ಯಾಲಕ್ಸಿ M33 5G ಫೋನ್‌ ಬಿಡುಗಡೆಗೆ ವೇದಿಕೆ ಸಿದ್ಧಪಡಿಸಿದೆ. ಈ ಸ್ಮಾರ್ಟ್‌ಫೋನ್‌ ಮುಂದಿನ ವಾರ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಆನ್‌ಲೈನ್‌ನಲ್ಲಿ ಮಾಹಿತಿ ಸೋರಿಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಒಳಗೊಂಡಿರಲಿದೆ. ಇದು ಎಕ್ಸಿನೋಸ್‌ 1280 SoC ಪ್ರೊಸೆಸರ್‌ ಬಲವನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ+ LCD ಡಿಸ್‌ಪ್ಲೇ ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದ್ದು,120Hz ರಿಫ್ರೆಶ್ ರೇಟ್‌ ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಎಕ್ಸಿನೋಸ್‌ 1280 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ಒನ್‌ UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿರಲಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 25W ವೇಗದ ಚಾರ್ಜಿಂಗ್ ಬೆಂಬಲಿಸುವ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಸಹ ಹೊಂದಿದೆ. ಇನ್ನು ಈ ಫೋನ್‌ ಬೆಲೆ ಹಾಗೂ ಲಭ್ಯತೆಯ ವಿವರ ಇನ್ನು ಅಧಿಕೃತವಾಗಿ ಬಹಿರಂಗಗೊಂಡಿಲ್ಲ.

ಸ್ಯಾಮ್‌ಸಂಗ್‌

ಇದಲ್ಲದೆ ಇತ್ತೀಚಿಗೆ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ A ಈವೆಂಟ್‌ನಲ್ಲಿ ಗ್ಯಾಲಕ್ಸಿ A53 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿತ್ತು. ಇನ್ನು ಈ ಫೋನ್‌ 6.5 ಇಂಚಿನ ಫುಲ್‌ HD+ ಸೂಪರ್ ಅಮೋಲೆಡ್‌ ಇನ್ಫಿನಿಟಿ-O ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

Best Mobiles in India

English summary
Samsung Galaxy M33 5G is tipped to sport a 6.6-inch LCD display with 120Hz refresh rate.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X