Home
ಸುದ್ದಿಜಾಲ

ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಬೆಲೆಯಲ್ಲಿ ಭರ್ಜರಿ ಇಳಿಕೆ!

ಜನಪ್ರಿಯ ಸ್ಯಾಮ್‌ಸಂಗ್ ಮೊಬೈಲ್‌ ಸಂಸ್ಥೆಯು ಮಾರುಕಟ್ಟೆಯಲ್ಲಿ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಗ್ಯಾಲಕ್ಸಿ M ಸರಣಿಯ ಫೋನ್‌ಗಳು ಬಜೆಟ್‌ ಪ್ರೈಸ್‌ನಲ್ಲಿ ಗಮನ ಸೆಳೆದಿವೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಇದೀಗ ಭರ್ಜರಿ ಇಳಿಕೆ ಆಗಿದ್ದು, ಗ್ರಾಹಕರು ಖುಷಿಯಿಂದ ನೋಡುವಂತೆ ಮಾಡಿದೆ.

ಹೌದು, ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. 6 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 24,999 ರೂ. ಆಗಿದ್ದು, ಕೊಡುಗೆಯಲ್ಲಿ 17,999 ರೂ. ಗಳಿಗೆ ಲಭ್ಯವಾಗಲಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಕೆಲವು ಆಫರ್‌ ಸಹ ಲಭ್ಯವಾಗಲಿವೆ ಜೊತೆಗೆ ಎಕ್ಸ್‌ಚೇಂಜ್ ಕೊಡುಗೆ ಸಹ ದೊರೆಯುತ್ತದೆ.

ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಬೆಲೆಯಲ್ಲಿ ಭರ್ಜರಿ ಇಳಿಕೆ!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD + ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು : ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಸ್ಯಾಮ್‌ಸಂಗ್‌ನ RAM ಪ್ಲಸ್ ಫೀಚರ್ಸ್‌ ಮೂಲಕ, RAM ಅನ್ನು ಅದರ 16GB ವರೆಗೆ ವಿಸ್ತರಿಸಬಹುದು.

ಕ್ಯಾಮೆರಾ ವಿಶೇಷ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್ ಜೊತೆಗೆ 120 ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಬೆಲೆಯಲ್ಲಿ ಭರ್ಜರಿ ಇಳಿಕೆ!

ಹಾಗೆಯೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಬೊಕೆ ಎಫೆಕ್ಟ್, ಸಿಂಗಲ್ ಟೇಕ್, ಆಬ್ಜೆಕ್ಟ್ ಎರೇಸರ್ ಮತ್ತು ವೀಡಿಯೋ TNR ಮತ್ತು ವೀಡಿಯೋಗ್ರಫಿ ಮೋಡ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25 W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್ ಮತ್ತು GPS ಅನ್ನು ಒಳಗೊಂಡಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಹೊಂದಿದೆ.

ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಬೆಲೆಯಲ್ಲಿ ಭರ್ಜರಿ ಇಳಿಕೆ!

ಬೆಲೆ ಮತ್ತು ಲಭ್ಯತೆ : ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6 GB + 128 GB ಸ್ಟೋರೇಜ್ ಮತ್ತು 8 GB + 128 GB ಸ್ಟೋರೇಜ್ ಆವೃತ್ತಿಯ ಆಯ್ಕೆ ಪಡೆದಿದೆ. ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಖರೀದಿಗೆ ಲಭ್ಯ.

Best Mobiles in India

English summary
Samsung Galaxy M33 available at Big Discount Price on Amazon; Check Offer Price and Specifications details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+