Home
ಸುದ್ದಿಜಾಲ

ಹೊಸ 'ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G' ಮೊಬೈಲ್‌ ಡಿಸ್ಕೌಂಟ್‌ ಬೆಲೆಗೆ ಲಭ್ಯ!

ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಕ್ಸಿ M ಸರಣಿಯಲ್ಲಿ ಇತ್ತೀಚಿಗಷ್ಟೆ ಪರಿಚಯಿಸಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಈ ಫೋನ್‌ ಇದೀಗ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ಮೊಬೈಲ್‌ನತ್ತ ತಿರುಗಿ ನೋಡುವಂತೆ ಮಾಡಿದೆ. ಈ ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಪಡೆದಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್‌ 6GB RAM ವೇರಿಯಂಟ್‌ 22% ರಷ್ಟು ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಗುರುತಿಕೊಂಡಿದೆ. ಈ ವೇರಿಯಂಟ್‌ ಬೆಲೆಯು 24,499ರೂ. ಗಳು ಆಗಿದ್ದು, ಅಮೆಜಾನ್‌ ಪ್ರೈಸ್‌ ಡೇಸ್‌ ಸೇಲ್‌ ಆಫರ್‌ನಲ್ಲಿ 18,999 ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಹೊಸ 'ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G' ಮೊಬೈಲ್‌ ಡಿಸ್ಕೌಂಟ್‌ ಬೆಲೆಗೆ ಲಭ್ಯ!

ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನ್‌ ಆಕ್ಟಾ-ಕೋರ್ Exynos 1280 SoC ಪವರ್‌ ಪಡೆದಿದ್ದು, ಪ್ರಾಥಮಿಕ ರಿಯರ್ ಕ್ಯಾಮೆರಾ 50 ಮೆಗಾಪಿಕ್ಸಲ್‌ ಸೆನ್ಸಾರ್‌ ರಚನೆಯಲ್ಲಿ ಇದೆ. ಹಾಗೆಯೇ ಈ ಫೋನ್ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್‌ ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಅಮೊಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಹೊಂದಿದ್ದು, ಡಿಸ್‌ಪ್ಲೇಯು ಪಂಚ್‌ ಹೋಲ್‌ ಕಟ್‌ಔಟ್‌ ಮಾದರಿಯಲ್ಲಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್‌ 5 ರಕ್ಷಣೆ ಪಡೆದಿದೆ.

ಪ್ರೊಸೆಸರ್‌ ಶಕ್ತಿ ಯಾವುದು ಮತ್ತು ಮೆಮೊರಿ ಆಯ್ಕೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್‌ ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್‌ ನಲ್ಲಿ ಕೆಲಸ ಮಾಡಲಿದ್ದು, ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಹೊಂದಿದೆ. ಇನ್ನು ಈ ಫೋನ್ 6GB + 128GB ಮತ್ತು 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ ಏನು : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್‌ ಮೂರು ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಹಾಗೂ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಎಷ್ಟು : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಬೆಂಬಲವಾಗಿ 25W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ ಆಯ್ಕೆಗಳ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಸೌಲಭ್ಯಗಳು ಸಹ ಇವೆ.

ಮೆಮೊರಿ ಮತ್ತು ಕಲರ್‌ ಆಯ್ಕೆ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನ್‌ 6GB RAM + 128GB ಸ್ಟೋರೇಜ್ ವೇರಿಯಂಟ್‌ ಮತ್ತು 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಇನ್ನು ಈ ಫೋನ್‌ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್‌ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Amazon offering a Huge discount on Samsung Galaxy M34 5G. offer price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+