Home
ಸುದ್ದಿಜಾಲ

Samsung:ಸ್ಯಾಮ್‌ಸಂಗ್‌ನ ಈ ಫೋನ್‌ ಮೇಲೆ 26% ಆಫರ್‌!..6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ!

ವರ್ಷಾಂತ್ಯದ ಸಮಯದಲ್ಲಿ ಸ್ಯಾಮ್‌ಸಂಗ್‌ ಫೋನ್‌ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಇ-ಕಾಮರ್ಸ್‌ ತಾಣ ಅಮೆಜಾನ್‌ನಲ್ಲಿ ಸ್ಯಾಮ್‌ಸಂಗ್‌ನ ಜನಪ್ರಿಯ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ M34 5G ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದೇ ವರ್ಷ ಬಿಡುಗಡೆ ಆಗಿದ್ದ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 26% ರಿಯಾಯಿತಿ ಪಡೆದಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿಯನ್ನು ಒಳಗೊ೦ಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ರಿಯಾಯಿತಿ ನಂತರದ ಬೆಲೆ ಎಷ್ಟಿದೆ? ಇದರ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ನ ಈ ಫೋನ್‌ ಮೇಲೆ 26% ಆಫರ್‌!..6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಡಿಸ್ಕೌಂಟ್‌ ಎಷ್ಟಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ 24,999ರೂ ಬೆಲೆಯಲ್ಲಿ ಪಟ್ಟಿ ಮಾಡಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಮೇಲೆ 26% ಡಿಸ್ಕೌಂಟ್‌ ನೀಡುತ್ತಿರುವುದರಿಂದ ಇದನ್ನು ಕೇವಲ 18,499ರೂ ಬೆಲೆಗೆ ಖರೀದಿಸಬಹುದಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಅನ್ನು ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ ವಿಶೇಷ ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದು. ಆದರಿಂದ ಇದರ ಬೆಲೆಯು ಇನ್ನಷ್ಟು ಇಳಿಕೆಯಾಗಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಫೀಚರ್ಸ್‌ ಏನಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಅಮೊಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದ್ದು, 120Hz ರಿಫ್ರೆಶ್ ರೇಟ್‌ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಸಹ ಪಡೆದಿದೆ.

ಸ್ಯಾಮ್‌ಸಂಗ್‌ನ ಈ ಫೋನ್‌ ಮೇಲೆ 26% ಆಫರ್‌!..6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB + 128GB ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಕ್ಯಾಮೆರಾ ಸೆಟಪ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ಎರಡನೇ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಹಾಗೂ ಮೂರನೇ ಕ್ಯಾಮೆರಾವು 2 ಮೆಗಾಪಿಕ್ಸಲ್‌ ಸೆನ್ಸಾರ್‌ ಪಡೆದಿವೆ. ಇದಲ್ಲದೆ 13 ಮೆಗಾಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್‌ನ ಈ ಫೋನ್‌ ಮೇಲೆ 26% ಆಫರ್‌!..6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಬ್ಯಾಟರಿ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಬೆಂಬಲವಾಗಿ 25W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ ಆಯ್ಕೆಗಳ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಸೌಲಭ್ಯಗಳು ಸಹ ಇವೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಡಿಸ್ಕೌಂಟ್‌ನಲ್ಲಿರುವುದರಿಂದ ಇದರ 6GB + 128GB ಸ್ಟೋರೇಜ್‌ ಆಯ್ಕೆಯನ್ನು ಕೇವಲ 18,499ರೂ ಬೆಲೆಗೆ ಖರೀದಿಸಬಹುದಾಗಿದೆ. ಈ ಫೋನ್‌ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್‌ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Samsung Galaxy M34 5G Gets Huge Discount in Amazon: Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+