ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಲಾಂಚ್ ಡೇಟ್ ಬಹಿರಂಗ! ಫೀಚರ್ಸ್ ನಿರೀಕ್ಷೆ ಏನು?
ಸ್ಯಾಮ್‌ಸಂಗ್ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್ ಮುಂದಿನ ತಿಂಗಳು ಭಾರತಕ್ಕೆ ಎಂಟ್ರಿ ನೀಡೋದು ಪಕ್ಕಾ ಆಗಿದೆ. ಇದೇ ಅವಧಿಯಲ್ಲಿ ಸ್ಮಾರ್ಟ್‌ಫೋನ್ ನಿರೀಕ್ಷಿತ ಫೀಚರ್ಸ್‌ಗಳು ಆನ್‌ಲೈನ್‌ನಲ್ಲಿ ಬಹಿರಂಗವಾಗಿದ್ದು, ಫುಲ್ ಹಲ್‌ಚಲ್ ಎಬ್ಬಿಸಿದೆ.
ಹೌದು, ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಜುಲೈ 7 ರಂದು ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್ ಫೀಚರ್ಸ್ ಆನ್‌ಲೈನ್‌ನಲ್ಲಿ ಬಹಿರಂಗವಾಗಿದ್ದು, ಇದು ವಿಷನ್ ಬೂಸ್ಟರ್ ತಂತ್ರಜ್ಞಾನದೊಂದಿಗೆ 6.5-ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ M34 5G ಫೀಚರ್ಸ್ ನಿರೀಕ್ಷೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 405 ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ ಎನ್ನಲಾಗಿದೆ.
ಸ್ಯಾಮ್‌ಸಂಗ್ M34 5G ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ M34 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಸ್ಯಾಮ್‌ಸಂಗ್ M34 5G ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ M34 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ನಿರೀಕ್ಷೆಯಿದೆ. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್ M34 5G ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ M34 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಮತ್ತು ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿರಲಿದೆ. '
ಸ್ಯಾಮ್‌ಸಂಗ್ M34 5G ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ M34 5G ಸ್ಮಾರ್ಟ್‌ಫೋನ್ ಅಮೆಜಾನ್.ಇನ್ ನಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಜೊತೆಗೆ ಅಧಿಕೃತ ಸ್ಯಾಮ್‌ಸಂಗ್ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ಆಫ್‌ಲೈನ್ ರಿಟೇಲ್ ಸ್ಟೋರ್‌ಗಳಲ್ಲಿ ಬರಲಿದೆ. ಇದರ ಬೆಲೆ 20,000ರೂ. ಆಗಿರಲಿದೆ ಎಂದು ಅಂದಾಜಿಸಲಾಗಿದೆ.
ಇದಲ್ಲದೆ ಸ್ಯಾಮ್‌ಸಂಗ್ ಕಂಪೆನಿ ಇತ್ತೀಚಿಗೆ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ ಅನ್ನು ಲೈಟ್ ಬ್ಲೂ ಮತ್ತು ರೆಡ್ ರೂಪಾಂತರಗಳಲ್ಲಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 6.8 ಇಂಚಿನ QHD+ ಡೈನಾಮಿಕ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ವೈಡ್ ಲೆನ್ಸ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.


Click it and Unblock the Notifications








