ವಾರೆವ್ಹಾ!..ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನಿಗೆ ಇಷ್ಟೊಂದು ಡಿಸ್ಕೌಂಟಾ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ M ಸರಣಿಯ ಜನಪ್ರಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆದರೆ ಈ ಮೊಬೈಲ್ ಇದೀಗ ಏಕ್ದಮ್ ಬೊಂಬಾಟ್ ರಿಯಾಯಿತಿ ಪಡೆದಿದ್ದು, ಮೊಬೈಲ್ ಖರೀದಿದಾರರು ಹುಬ್ಬೇರಿಸುವಂತೆ ಮಾಡಿದೆ.
ಹೌದು, ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್ ಶೇ. 22% ರಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 6GB + 128GB ವೇರಿಯಂಟ್ ಬೆಲೆಯು 24,499ರೂ. ಗಳು ಆಗಿದ್ದು, ಆದರೆ ಅಮೆಜಾನ್ ಕೊಡುಗೆಯಲ್ಲಿ 18,999 ರೂ. ಗಳಿಗೆ ಗ್ರಾಹಕರು ಖರೀದಿ ಮಾಡಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸಲ್ ಸೆನ್ಸಾರ್ ರಚನೆ ಒಳಗೊಂಡಿದೆ. ಹಾಗೆಯೇ ಈ ಮೊಬೈಲ್ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್ ಬ್ಲೂ ಕಲರ್ ಆಯ್ಕೆಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸದ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, ಡಿಸ್‌ಪ್ಲೇಯು ಪಂಚ್ ಹೋಲ್ ಕಟ್‌ಔಟ್ ಮಾದರಿ ಪಡೆದಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದಿದೆ ಕೂಡಾ ಇದೆ.
ಪ್ರೊಸೆಸರ್ ಕಾರ್ಯವೈಖರಿ ಮತ್ತು ಮೆಮೊರಿ ಆಯ್ಕೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್ ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್ ನಲ್ಲಿ ಕಾರ್ಯ ಮಾಡಲಿದ್ದು, ಜೊತೆಗೆ ಇದಕ್ಕೆ ಸಪೋರ್ಟ್ ಆಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲ ಹೊಂದಿದೆ. ಇನ್ನು ಈ ಫೋನ್ 6GB + 128GB ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಪಡೆದುಕೊಂಡಿದೆ.
ಕ್ಯಾಮೆರಾ ಸೆನ್ಸಾರ್ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್ ಮೂರು ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಪ್ರಥಮ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಹಾಗೂ ಮೂರನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.
ಬ್ಯಾಟರಿ ಬ್ಯಾಕ್‌ಅಪ್ ಎಷ್ಟು : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದಕ್ಕೆ ಸಪೋರ್ಟ್ ಆಗಿ 25W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್ ಆಯ್ಕೆಗಳ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಸೌಲಭ್ಯಗಳು ಕೂಡಾ ಇವೆ.
ಸ್ಟೋರೇಜ್ ಮತ್ತು ಕಲರ್ ಆಯ್ಕೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್ ಎರಡು ಸ್ಟೋರೇಜ್ ಆಯ್ಕೆ ಪಡೆದಿದೆ. ಅವು ಕ್ರಮವಾಗಿ 6GB RAM + 128GB ವೇರಿಯಂಟ್ ಮತ್ತು 8GB RAM + 128GB ವೇರಿಯಂಟ್ ಆಗಿವೆ. ಇನ್ನು ಈ ಮೊಬೈಲ್ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.


Click it and Unblock the Notifications








