Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಸ್ಟೈಲಿಶ್‌ 5G ಫೋನ್‌ ಬೆಲೆ ತಿಳಿದ್ರೆ, ನೀವು ಹುಬ್ಬೇರಿಸ್ತೀರಾ!

ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ M ಸರಣಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆದರೆ ಈ ಮೊಬೈಲ್‌ ಇದೀಗ ಸಖತ್ ರಿಯಾಯಿತಿ ಪಡೆದಿದ್ದು, ಮೊಬೈಲ್‌ ಖರೀದಿದಾರರು ಹುಬ್ಬೇರಿಸುವಂತೆ ಮಾಡಿದೆ.

ಹೌದು, ಜನಪ್ರಿಯ ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್‌ ಶೇ. 32% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 6GB + 128GB ವೇರಿಯಂಟ್‌ ಬೆಲೆಯು 24,499ರೂ. ಗಳು ಆಗಿದ್ದು, ಆದರೆ ಅಮೆಜಾನ್‌ ಆಫರ್‌ನಲ್ಲಿ 16,548 ರೂ. ಗಳಿಗೆ ಗ್ರಾಹಕರು ಖರೀದಿ ಮಾಡಬಹುದು.

ಸ್ಯಾಮ್‌ಸಂಗ್‌ನ ಈ ಸ್ಟೈಲಿಶ್‌ 5G ಫೋನ್‌ ಬೆಲೆ ತಿಳಿದ್ರೆ, ನೀವು ಹುಬ್ಬೇರಿಸ್ತೀರಾ!

ಅಂದಹಾಗೆ ಸ್ಯಾಮ್‌ಸಂಗ್‌ನ ಈ ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್‌ ಸೆನ್ಸಾರ್‌ ರಚನೆ ಪಡೆದಿದೆ. ಹಾಗೆಯೇ ಈ ಮೊಬೈಲ್‌ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್‌ ಬ್ಲೂ ಕಲರ್‌ ಒಳಗೊಂಡಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಸ್ಯಾಮ್‌ಸಂಗ್‌ನ ಈ ಸ್ಟೈಲಿಶ್‌ 5G ಫೋನ್‌ ಬೆಲೆ ತಿಳಿದ್ರೆ, ನೀವು ಹುಬ್ಬೇರಿಸ್ತೀರಾ!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸದ ಮಾಹಿತಿ

ಸ್ಯಾಮ್‌ಸಂಗ್‌ನ ಈ ಮೊಬೈಲ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಪಡೆದಿದ್ದು, ಡಿಸ್‌ಪ್ಲೇಯು ಪಂಚ್‌ ಹೋಲ್‌ ಕಟ್‌ಔಟ್‌ ಮಾದರಿ ಪಡೆದಿದೆ. ಹಾಗೆಯೇ ಗೊರಿಲ್ಲಾ ಗ್ಲಾಸ್‌ 5 ರಕ್ಷಣೆ ಪಡೆದಿದೆ ಸಹ ಇದೆ.

ಪ್ರೊಸೆಸರ್‌ ಕಾರ್ಯವೈಖರಿ ಹೀಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನ್ ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್‌ ನಲ್ಲಿ ಕಾರ್ಯ ಮಾಡಲಿದ್ದು, ಇದರ ಜೊತೆಗೆ ಇದಕ್ಕೆ ಸಪೋರ್ಟ್‌ ಆಗಿ ಆಂಡ್ರಾಯ್ಡ್‌ 13 ಓಎಸ್‌ ಬೆಂಬಲ ಹೊಂದಿದೆ. ಇನ್ನು ಈ ಫೋನ್ 6GB + 128GB ಮತ್ತು 8GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಹೊಂದಿದೆ.

ತ್ರಿವಳಿ ಕ್ಯಾಮೆರಾ ಸೆನ್ಸಾರ್ ಮಾಹಿತಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್‌ ಮೂರು ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಆಗಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಹಾಗೂ ಮೂರನೇ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಸಪೋರ್ಟ್‌ ಆಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ ಆಯ್ಕೆಗಳ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಸೌಲಭ್ಯಗಳು ಕೂಡಾ ಇವೆ.

ಸ್ಯಾಮ್‌ಸಂಗ್‌ನ ಈ ಸ್ಟೈಲಿಶ್‌ 5G ಫೋನ್‌ ಬೆಲೆ ತಿಳಿದ್ರೆ, ನೀವು ಹುಬ್ಬೇರಿಸ್ತೀರಾ!

ಮೆಮೊರಿ ಮತ್ತು ಕಲರ್‌ ಆಯ್ಕೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಎರಡು ಸ್ಟೋರೇಜ್‌ ಆಯ್ಕೆ ಪಡೆದಿದೆ. ಅವು ಕ್ರಮವಾಗಿ 6GB RAM + 128GB ವೇರಿಯಂಟ್‌ ಮತ್ತು 8GB RAM + 128GB ವೇರಿಯಂಟ್‌ ಆಗಿವೆ. ಇನ್ನು ಈ ಮೊಬೈಲ್‌ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್‌ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದೆ.

Best Mobiles in India

English summary
Samsung Galaxy M34 5G price drop on amazon. all phones list here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+