Home
ಸುದ್ದಿಜಾಲ

ಎಂಟ್ರಿಗೆ ಸಿದ್ಧವಾಗಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G! ಮಾರುಕಟ್ಟೆಯಲ್ಲಿ ದೂಳೆಬ್ಬಿಸೋದು ಪಕ್ಕಾನಾ!

ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈಗಾಗಲೇ ಗ್ಯಾಲಕ್ಸಿ M ಸರಣಿಯ ಸ್ಮಾರ್ಟ್‌ಫೋನ್‌ನ ಪಟ್ಟಿಯು ಮಾಡೆಲ್‌ ನಂಬರ್‌ನೊಂದಿಗೆ ಪ್ಲಾಟ್‌ಫಾರ್ಮ್‌ನಲ್ಲಿ ಲೈವ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ BIS ಪ್ರಮಾಣೀಕರಣವನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧವಾಗಿದೆ. ಇನ್ನು ಗ್ಯಾಲಕ್ಸಿ M ಸರಣಿಯು ಏನೆಲ್ಲಾ ಫೀಚರ್ಸ್‌ ಹೊಂದಿರಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ. ಆದರೆ ಕೆಲವು ವೆಬ್‌ಸೈಟ್‌ಗಳಲ್ಲಿ ಇದರ ನಿರೀಕ್ಷಿತ ಫೀಚರ್ಸ್‌ ಬಗ್ಗೆ ವರದಿಯಾಗಿದೆ. ಹಾಗಾದ್ರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5Gನಲ್ಲಿ ಏನೆಲ್ಲಾ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಎಂಟ್ರಿಗೆ ಸಿದ್ಧವಾಗಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G! ದೂಳೆಬ್ಬಿಸೋದು ಪಕ್ಕಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಫೀಚರ್ಸ್‌ ನಿರೀಕ್ಷೆ ಏನು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಗಾತ್ರದಲ್ಲಿ ಬರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಡಿಸ್‌ಪ್ಲೇ ಪಿಕ್ಸೆಲ್ ಸಾಂದ್ರತೆ 393PPI ಪಿಕ್ಸೆಲ್‌ ಇರಬಹುದು ಎಂಬ ನಿರೀಕ್ಷೆಯಿದೆ. ಇನ್ನು ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್‌ ವಿನ್ಯಾಸದಲ್ಲಿ ಬರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಎಕ್ಸಿನೋಸ್‌ 1280 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB + 128GB ಇಂಟರ್‌ ಸ್ಟೋರೇಜ್ ಮಾದರಿಯ ಆಯ್ಕೆಯಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಕ್ಯಾಮೆರಾ ಸೆಟ್‌ಅಪ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರಬಹುದು. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಬ್ಯಾಟರಿ ಮತ್ತು ಇತರೆ ಸೌಲಭ್ಯ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆಯಲ್ಲಿ ಬರುವ ಸಾದ್ಯತೆಯಿದೆ. ಇದು 25W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೊರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಎಂಟ್ರಿಗೆ ಸಿದ್ಧವಾಗಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G! ದೂಳೆಬ್ಬಿಸೋದು ಪಕ್ಕಾ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್‌ 30,000ರೂ. ವಿಭಾಗದಲ್ಲಿ ಬರುವ ಸಾದ್ಯತೆಯಿದೆ. ಸದ್ಯ ಈ ಹೊಸ 5G ಫೋನ್‌ನ ಅಧಿಕೃತ ಬಿಡುಗಡೆ ದಿನಾಂಕವನ್ನು ಕಂಪನಿಯು ಇನ್ನೂ ದೃಢಪಡಿಸಿಲ್ಲ. ಆದರೆ, ಶೀಘ್ರದಲ್ಲೇ ಈ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡೋದು ಪಕ್ಕಾ ಆಗಿದೆ.

ಇನ್ನು ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ 'ಬಿಗ್ ಟಿವಿ ಡೇಸ್' ಕೊಡುಗೆಗಳನ್ನು ಪ್ರಕಟಿಸಿದೆ. ಈ ಮೂಲಕ ಬಿಗ್‌ ಸೈಜ್‌ ಸ್ಮಾರ್ಟ್‌ಟಿವಿ ಖರೀದಿಸಬೇಕೆಂದು ಕೊಂಡವರಿಗೆ ಉತ್ತಮ ಅವಕಾಶ ಕಲ್ಪಿಸಿದೆ. ಇನ್ನು ಈ ಸೇಲ್‌ ಜೂನ್ 15 ಮತ್ತು ಜುಲೈ 25, 2023ರ ನಡುವೆ ನಡೆಯಲಿದೆ. ಈ ಆಫರ್ ಅವಧಿಯಲ್ಲಿ ಗ್ರಾಹಕರು EMI ಆಯ್ಕೆಯಲ್ಲಿ 20% ವರೆಗೆ ಹೆಚ್ಚುವರಿ ಕ್ಯಾಶ್‌ಬ್ಯಾಕ್ ಅನ್ನು ಪಡೆಯುವ ಅವಕಾಶ ಸಿಗಲಿದೆ.

Best Mobiles in India

English summary
Samsung Galaxy M34 5G will soon launch in India: Expected specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+