ಬಜೆಟ್ ಬೆಲೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಲಾಂಚ್!..ಫೀಚರ್ಸ್ ಏನು?
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ M ಸರಣಿಯಲ್ಲಿ ಇದೀಗ ಮತ್ತೆ ಹೊಸದೊಂದು ಸ್ಮಾರ್ಟ್‌ಫೋನ್ ಲಾಂಚ್ ಮಾಡಿದ್ದು, ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಆಗಿದೆ. ಈ ನೂತನ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 128GB ಆಂತರೀಕ ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.
ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ 6GB ಮತ್ತು 8GB RAM ವೇರಿಯಂಟ್ ಆಯ್ಕೆ ಪಡೆದಿದ್ದು, ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಒಳಗೊಂಡಿದೆ. ಹಾಗೆಯೇ ಇದು ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅಂದಹಾಗೆ ಈ ಫೋನ್ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ.

ಹಾಗೆಯೇ ಈ ಮೊಬೈಲ್ 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಅಮೊಲೆಡ್ ಡಿಸ್‌ಪ್ಲೇ ಪಡೆದಿದೆ. ಇನ್ನು ಈ ಫೋನ್ ಪ್ರಿಸ್ಮ್ ಸಿಲ್ವರ್, ಮೀಡ್‌ನೈಟ್ ಬ್ಲೂ ಹಾಗೂ ವಾಟರ್‌ಫಾಲ್ ಬ್ಲೂ ಕಲರ್ ಆಯ್ಕೆ ಅನ್ನು ಒಳಗೊಂಡಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ್ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಅಮೊಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದ್ದು, ಡಿಸ್‌ಪ್ಲೇಯು ಪಂಚ್ ಹೋಲ್ ಕಟ್‌ಔಟ್ ಮಾದರಿಯಲ್ಲಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದಿದೆ.
ಪ್ರೊಸೆಸರ್ ಪವರ್ ಮತ್ತು ಮೆಮೊರಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ. ಇನ್ನು ಈ ಫೋನ್ 6GB + 128GB ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಕ್ಯಾಮೆರಾ ಸೆನ್ಸಾರ್ ಎಷ್ಟಿದೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಹಾಗೂ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಎಷ್ಟಿದೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಯುಎಸ್‌ಬಿ ಟೈಪ್-ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್ ಆಯ್ಕೆಗಳ ಜೊತೆಗೆ ಬ್ಲೂಟೂತ್ 5.2, ಎನ್‌ಎಫ್‌ಸಿ ಆಯ್ಕೆಗಳು ಸಹ ಇವೆ.
ಬೆಲೆ ಮತ್ತು ಕಲರ್ ಆಯ್ಕೆ ಮಾಹಿತಿ : ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೋನ್ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 17,999ರೂ. ಆಗಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 18,999 ರೂ. ಆಗಿದೆ. ಇನ್ನು ಈ ಫೋನ್ ಪ್ರಿಸ್ಮ್ ಸಿಲ್ವರ್, ಮಿಡ್ನೈಟ್ ಬ್ಲೂ ಮತ್ತು ವಾಟರ್‌ಫಾಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ. ಈ ಫೋನ್ ಅಮೆಜಾನ್ ಪ್ರೈಮ್ ಡೇ ಸಮಯದಲ್ಲಿ ಮಾರಾಟ ಪ್ರಾರಂಭಿಸಲಿದೆ.


Click it and Unblock the Notifications








