ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಲಾಂಚ್‌ಗೆ ದಿನಾಂಕ ನಿಗದಿ!
ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯ ಬಹುನಿರೀಕ್ಷಿತ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಅಧಿಕೃತ ಮುಹೂರ್ತ ಫಿಕ್ಸ್ ಆಗಿದೆ. ಈಗಾಗಲೇ ಈ ಫೋನಿನ ಲೀಕ್ ಫೀಚರ್ಸ್‌ಗಳು ಸ್ಮಾರ್ಟ್‌ಪೋನ್ ಪ್ರಿಯರಲ್ಲಿ ಭಾರೀ ಕುತೂಹಲ ಹುಟ್ಟು ಹಾಕಿವೆ. ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 750G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.

ಹೌದು, ಸ್ಯಾಮ್‌ಸಂಗ್ ಕಂಪನಿಯ ನೂತನ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಇದೇ ಏಪ್ರಿಲ್ 28 ರಂದು ಬಿಡುಗಡೆ ಆಗಲಿದೆ. ಈ ಸ್ಮಾರ್ಟ್‌ಫೋನ್ 6GB ಮತ್ತು 8GB RAM ವೇರಿಯಂಟ್ ಮಾದರಿಗಳನ್ನು ಒಳಗೊಂಡಿರಲಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದಿರಲಿದೆ. ಹಾಗೆಯೇ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನುಳಿದಂತೆ ಗ್ಯಾಲಕ್ಸಿ M42 5G ಫೋನ್ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿರಲಿದೆ ಹಾಗೂ ಈ ಫೋನಿನ ಬೆಲೆ ಎಷ್ಟಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 266 ಪಿಪಿಐ ಸಾಂದ್ರತೆ ಯನ್ನು ಒಳಗೊಂಡಿದೆ. ಅಲ್ಲದೆ ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತನ 84.3% ಹೊಂದಿದೆ.

ಯಾವ ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 5G SoC ಪ್ರೊಸೆಸರ್ ಅನ್ನು ಹೊಂದಿರಲಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 6GB RAM + 128GB ಮತ್ತು 8GB RAM + 128GB ಆಯ್ಕೆಗಳಲ್ಲಿ ಲಭ್ಯವಿರಲಿದೆ. ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಇರಲಿದೆ.

ಕ್ಯಾಮೆರಾ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿರಲಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್ ಹೊಂದಿರಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಅನ್ನು ಈ ತಿಂಗಳು ಬಿಡುಗಡೆ ಮಾಡಲಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M 42 5G ಫೋನಿನ 6GB RAM ವೇರಿಯಂಟ್ ಬೆಲೆಯು 20,000ರೂ.ಗಳ ಆಸುಪಾಸಿನಲ್ಲಿರಲಿದೆ. ಹಾಗೆಯೇ ಬಹಿರಂಗಗೊಂಡಿದೆ. 8GB RAM ವೇರಿಯಂಟ್ ಸ್ಮಾರ್ಟ್‌ಫೋನಿನ ಬೆಲೆಯು 24,999ರೂ. ಬೆಲೆಯ ಆಸುಪಾಸಿನಲ್ಲಿ ಇರಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








