ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

|

ದಕ್ಷಿಣ ಕೋರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಸದ್ಯ ಇದೀಗ ಸ್ಯಾಮ್‌ಸಂಗ್‌ ತನ್ನ ಗ್ಯಾಲಕ್ಸಿ ಎಂ ಸರಣಿಯಲ್ಲಿ ಹೊಸ ಗ್ಯಾಲಕ್ಸಿ m42 5G ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ಸ್ಯಾಮ್‌ಸಂಗ್ m42 5g

ಹೌದು, ಸ್ಯಾಮ್‌ಸಂಗ್ ಸಂಸ್ಥೆ ಹೊಸ ಗ್ಯಾಲಕ್ಸಿ m42 5G ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಒಳಗೊಂಡಿರುವ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಸ್ಯಾಮ್‌ಸಂಗ್ ಗ್ಯಾಲಕ್ಸಿ m42 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 84.3% ಸ್ಕ್ರೀನ್‌ ಟು ಬಾಡಿ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 1TBವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸಿಂಗಲ್ ಟೇಕ್, ನೈಟ್ ಮೋಡ್, ಹೈಪರ್ಲ್ಯಾಪ್ಸ್, ಸೂಪರ್-ಸ್ಲೋ ಮೋಷನ್, ಸೀನ್ ಆಪ್ಟಿಮೈಜರ್ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 36 ಗಂಟೆಗಳ ಟಾಕ್ ಟೈಮ್, 22 ಗಂಟೆಗಳ ಇಂಟರ್ನೆಟ್ ಬ್ರೌಸಿಂಗ್ ಮತ್ತು 34 ಗಂಟೆಗಳ ವಿಡಿಯೋ ಪ್ಲೇ ಅನ್ನು ನೀಡಲಿದೆ. ಇದು ನಾಕ್ಸ್ ಭದ್ರತೆ ಮತ್ತು ಸ್ಯಾಮ್‌ಸಂಗ್ ಪೇ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ರೂ. 6GB RAM + 128GB ಶೇಖರಣಾ ಮಾದರಿಗೆ 21,999 ರೂ. ಹಾಗೂ 8GB RAM + 128GB ಶೇಖರಣಾ ಆಯ್ಕೆಗೆ 23,999 ರೂ. ಬೆಲೆಯನ್ನು ಹೊಂದಿದೆ. ಸದ್ಯ ಪರಿಚಯಾತ್ಮಕ ಬೆಲೆಯಲ್ಲಿ ರೂ. 6 GB RAM + 128GB ಶೇಖರಣಾ ಮಾದರಿಗೆ 19,999 ಮತ್ತು ಮೇ ತಿಂಗಳಲ್ಲಿ 8GB RAM + 128GB ಶೇಖರಣಾ ಮಾದರಿಗೆ 21,999 ರೂ.ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಮೆಜಾನ್.ಇನ್, ಸ್ಯಾಮ್‌ಸಂಗ್.ಕಾಮ್ ಮತ್ತು ಆಯ್ದ ಚಿಲ್ಲರೆ ಅಂಗಡಿಗಳ ಮೂಲಕ ಮೇ 1 ರಂದು ಸೇಲ್‌ ಆಗಲಿದೆ. ಗ್ಯಾಲಕ್ಸಿ M42 5G ಪ್ರಿಸ್ಮ್ ಡಾಟ್ ಬ್ಲ್ಯಾಕ್ ಮತ್ತು ಪ್ರಿಸ್ಮ್ ಡಾಟ್ ಗ್ರೇ ಬಣ್ಣಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Samsung Galaxy M42 5G smartphone launched in the Indian market.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X