ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಬೆಲೆ ಬಹಿರಂಗ!
ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲ್ಯಾಕ್ಸಿ A ಮತ್ತು M ಸರಣಿಯಲ್ಲಿ ಇತ್ತೀಚಿಗೆ ಹಲವು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿನ ಬಜೆಟ್ ಬೆಲೆಯ ಫೋನ್‌ಗಳಿಂದ ಹೈ ಎಂಡ್ ಸ್ಮಾರ್ಟ್‌ಫೋನ್‌ಗಳನ್ನು ಹೊಂದಿದ್ದು, ಗ್ರಾಹಕರ ಗಮನ ಸೆಳೆದಿವೆ. ಸದ್ಯ ಇದೀಗ M ಸರಣಿಯಲ್ಲಿ ಹೊಸ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ಹೊಸ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಬಿಡುಗಡೆ ವೇದಿಕೆ ಸಿದ್ದ ಪಡಿಸಿಕೊಂಡಿದೆ. ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿಕೊಡಲಿರುವ ಈ ಸ್ಮಾರ್ಟ್‌ಫೊನ್ ಬೆಲೆ ಇದೀಗ ಬಹಿರಂಗಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 24,999 ರೂ ಬೆಲೆಯಲ್ಲಿ ಭಾರತದಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 5G SoC ಪ್ರೊಸೆಸರ್ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 20: 9 ರಚನೆಯ ಅನುಪಾತ ಮತ್ತು 266 ಪಿಪಿಐ ಸಾಂದ್ರತೆ ಯನ್ನು ಒಳಗೊಂಡಿದೆ. ಅಲ್ಲದೆ ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತನ 84.3% ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750 5G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4 GB RAM + 128GB, 6GB RAM + 128GB ಮತ್ತು 8GB RAM + 128GB ಆಯ್ಕೆಗಳಲ್ಲಿ ಲಭ್ಯವಿದೆ.

ಕ್ಯಾಮೆರಾ ವಿನ್ಯಾಸ
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ ಎಸಿ, ಬ್ಲೂಟೂತ್ ವಿ 5.0, ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸ್ಕ್ಯಾನರ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M42 5G ಸ್ಮಾರ್ಟ್‌ಫೋನ್ ಈ ತಿಂಗಳು ದೇಶದಲ್ಲಿ ಬಿಡುಗಡೆ ಮಾಡಲಿದೆ ಎಂಬ ವದಂತಿ ಇದೆ. ಈಗ, ಬಿಡುಗಡೆಗೆ ಮುಂಚಿತವಾಗಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ M 42 5G ಬೆಲೆ ವಿವರಗಳು ಬಹಿರಂಗಗೊಂಡಿದೆ. ಸದ್ಯ ಲಭ್ಯ ಮಾಹಿತಿ ಪ್ರಕಾರನ ಈ ಸ್ಮಾರ್ಟ್‌ಫೋನ್ 24,999ರೂ. ಬೆಲೆಯನ್ನು ಹೊಂದಿರಲಿದೆ ಎನ್ನಲಾಗಿದೆ.


Click it and Unblock the Notifications








