Home
ಸುದ್ದಿಜಾಲ

ಬಿಡುಗಡೆಗೂ ಮುನ್ನವೇ ಧೂಳೆಬ್ಬಿಸಿದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G! ಫೀಚರ್ಸ್‌ ಇದೀಗ ಅಧಿಕೃತ!

ಸ್ಯಾಮ್‌ಸಂಗ್‌ ಕಂಪೆನಿ ಶೀಘ್ರದಲ್ಲೇ ಹೊಸ ಗ್ಯಾಲಕ್ಸಿ M44 5G ಫೋನ್‌ ಪರಿಚಯಿಸಲು ತಯಾರಿ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಮೂಲಕ ಬಿಡುಗಡೆಗೂ ಮುನ್ನವೇ ಗ್ಯಾಲಕ್ಸಿ M44 5G ಫೋನ್‌ ಸಿಕ್ಕಾಪಟ್ಟೆ ಸೌಂಡ್‌ ಮಾಡಲು ಶುರುಮಾಡಿದೆ. ಇನ್ನು ಈ ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗವಾಗಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರಲಿದೆ. ಜೊತೆಗೆ ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರುವ ನಿರೀಕ್ಷೆ ಇಡಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೂ ಮುನ್ನವೇ ಧೂಳೆಬ್ಬಿಸಿದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಡಿಸ್‌ಪ್ಲೇ ರಚನೆ ನಿರೀಕ್ಷೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಇನ್ನು ಡಿಸ್‌ಪ್ಲೇ ಮಧ್ಯದಲ್ಲಿ ವಾಟರ್-ಡ್ರಾಪ್ ಆಕಾರದ ನಾಚ್ ವಿನ್ಯಾಸ ನೀಡಲಾಗಿದ್ದು, 120Hz ರಿಫ್ರೆಶ್ ರೇಟ್ ನೊಂದಿಗೆ ಬರಲಿದೆ. ಇದು 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯದ ವರೆಗೆ ವಿಸ್ತರಿಸಬಹುದಾಗಿದೆ.

ಬಿಡುಗಡೆಗೂ ಮುನ್ನವೇ ಧೂಳೆಬ್ಬಿಸಿದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಕ್ಯಾಮೆರಾ ಸೆಟ್‌ಅಪ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಜೊತೆಗೆ ಮೂರನೇ ಕ್ಯಾಮೆರಾ ಕೂಡ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ನೊಂದಿಗೆ ಬರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ ನಿರೀಕ್ಷೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ, ಬ್ಲೂಟೂತ್ v5.2, USB ಟೈಪ್-ಸಿ ಪೋರ್ಟ್, Wi-Fi 802.11 b/g /n/ac, NFC, GPS,ಅನ್ನು ಬೆಂಬಲಿಸಲಿದೆ.

ಬಿಡುಗಡೆಗೂ ಮುನ್ನವೇ ಧೂಳೆಬ್ಬಿಸಿದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M44 5G ಸ್ಮಾರ್ಟ್‌ಫೋನ್‌ ಕೇವಲ ಕಪ್ಪು ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಪ್ರಸ್ತುತ, ಸ್ಯಾಮ್‌ಸಂಗ್‌ ಕಂಪೆನಿ ಈ ಡವೈಸ್‌ನ ಬೆಲೆ ಮತ್ತು ಲಭ್ಯತೆಯ ವಿವರಗಳನ್ನು ಅಧಿಕೃತವಾಗಿ ಘೋಷಿಸಿಲ್ಲ.

ಇನ್ನು ಸ್ಯಾಮ್‌ಸಂಗ್‌ ಕಂಪೆನಿ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್‌ ಪರಿಚಯಿಸುವುದಕ್ಕೆ ಕೂಡ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಐಫೋನ್‌ ಮಾದರಿಯ ಫೀಚರ್ಸ್‌ಗಳನ್ನು ಹೊಂದಿರಲಿದೆ ಎನ್ನಲಾಗಿದೆ. ಅದರಲ್ಲೂ ತುರ್ತು ಸೇವೆಗಳಿಗಾಗಿ ಉಪಗ್ರಹ ಸಂಪರ್ಕವನ್ನು (satellite connectivity) ಹೊಂದಿರಲಿವೆ ಎಂದು ತಿಳಿದುಬಂದಿದೆ. ಈ ಮೂಲಕ ಈ ಸ್ಮಾರ್ಟ್‌ಫೋನ್‌ ಬಳಕೆದಾರರು ಎಂತಹುದೇ ಪ್ರದೇಶದಲ್ಲಿ ಅಪಾಯಕ್ಕೆ ಸಿಲುಕಿದರೆ ಸಹಾಯಕ್ಕೆ ಕರೆ ಮಾಡಲು ಅನುವು ಮಾಡಿಕೊಡುತ್ತದೆ.

Best Mobiles in India

English summary
Samsung Galaxy M44 5G With 25W Fast Charging Goes Official: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+