ಮಾರುಕಟ್ಟೆಗೆ ಬರಲಿವೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಮತ್ತು M31s ಸ್ಮಾರ್ಟ್‌ಫೋನ್!
ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಕಂಪೆನಿ ತನ್ನ ನವೀನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಟೆಕ್ ವಲಯದಲ್ಲಿ ತನ್ನ ಜನಪ್ರಿಯತೆಯನ್ನ ಪಡದುಕೊಂಡಿದೆ. ಈಗಾಗಲೇ ಹಲವು ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿರುವ ಸ್ಯಾಮ್‌ಸಂಗ್ ಕಂಪೆನಿ ಇದೀಗ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಬಿಡುಗಡೆಗೆ ವೇದಿಕೆ ಸಿದ್ದ ಪಡಿಸುತ್ತಿದೆ.

ಹೌದು, ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಜನಪ್ರಿಯ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿರುವ ಸ್ಯಾಮ್‌ಸಂಗ್ ಕಂಪೆನಿ ಭಾರತೀಯ ಮಾರುಕಟ್ಟೆಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಮತ್ತು ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲು ಸಿದ್ದತೆ ನಡೆಸಿದೆ. ಸದ್ಯ ಲಭ್ಯವಾಗಿರುವ ಮಾಹಿತಿ ಪ್ರಕಾರ, ಗ್ಯಾಲಕ್ಸಿ M51 ಮತ್ತು ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್ ಗಳು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಮುಖ್ಯ ಕ್ಯಾಮೆರಾಗಳನ್ನ ಹೊಂದಿರಲಿದ್ದು, ಜೂನ್ ತಿಂಗಳಿನಲ್ಲಿ ಬಿಡುಗಡೆ ಆಗಲಿವೆ ಎಂದು ಹೇಳಲಾಗ್ತಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್
ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ ಹೊಸ ಮಾದರಿಯ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿರಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿರುವ ಮುಖ್ಯ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ ಎನ್ನಲಾಗ್ತಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುವ ಸಾಧ್ಯತೆ ಇದೆ. ಅಲ್ಲದೆ ಗ್ಯಾಲಕ್ಸಿ M51 ಅನ್ನು ಮಧ್ಯ ಶ್ರೇಣಿಯ ಫೋನ್ ಆಗಿರಲಿದೆ ಎಂದು ಹೇಳಲಾಗಿದೆ.

ಇನ್ನು ಗ್ಯಾಲಕ್ಸಿ M51 ಸ್ಯಾಮ್‌ಸಂಗ್ ಗ್ಯಾಲಕ್ಸಿ A51 ನ ಮರುಬ್ರಾಂಡೆಡ್ ಆವೃತ್ತಿಯಾಗಿದೆ ಎಂದು ಹೇಳಲಾಗಿತ್ತು. ಅಲ್ಲದೆ ಈ ಫೋನ್ 128GB ಆನ್‌ಬೋರ್ಡ್ ಸ್ಟೊರೇಜ್ ಸಾಮರ್ಥ್ಯವನ್ನ ಹೊಂದಿರಲಿದೆ ಎನ್ನಲಾಗಿತ್ತು. ಹಾಗೇ ನೋಡುವುದಾದರೆ ಗ್ಯಾಲಕ್ಸಿ A51 ಅನ್ನು ಭಾರತದಲ್ಲಿ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ 6.5-ಇಂಚಿನ ಸೂಪರ್ ಅಮೋಲೆಡ್ ಫುಲ್-ಎಚ್ಡಿ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಎಕ್ಸಿನೋಸ್ 9611 SoC ಪ್ರೊಸೆಸರ್ ಅನ್ನು ಒಳಗೊಂಡಿತ್ತು. ಇದೀಗ ಗ್ಯಾಲಕ್ಸಿ M51 ಕೂಡ ಇದೇ ಮಾದರಿಯಲ್ಲಿ ಬರಲಿದೆ ಎಂದಯ ವರದಿ ಆಗಿದೆ.

ಗ್ಯಾಲಕ್ಸಿ M31s
ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್ ಕೂಡ ಗ್ಯಾಲಕ್ಸಿ m51ಸ್ಮಾರ್ಟ್‌ಫೋನ್ ಮಾದರಿಯಲ್ಲಿಯೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ಅನ್ನು ಹೊಂದಿದೆ. ಅಷ್ಟೇ ಅಲ್ಲ ಈ ಸ್ಮಾರ್ಟ್‌ಫೋನ್ ಕೂಡ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಹೊಂದಿರುವ ಮುಖ್ಯ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ ಗ್ಯಾಲಕ್ಸಿ m31s ಸ್ಮಾರ್ಟ್‌ಫೋನ್ 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ m31 ರ ಅಪ್‌ಗ್ರೇಡ್ ಆವೃತ್ತಿಯಾಗಿದೆ.


Click it and Unblock the Notifications








