ಸ್ಯಾಮ್‌ಸಂಗ್‌ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಟೆಕ್‌ ದಿಗ್ಗಜ ಸ್ಯಾಮ್‌ಸಂಗ್‌ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗ್ಲೆ ಹಲವು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿರುವ ಖ್ಯಾತಿ ಸ್ಯಾಮ್‌ಸಂಗ್‌ ಕಂಪೆನಿಯದ್ದಾಗಿದೆ. ಹಲವು ಹೊಸತುಗಳಿಗೆ ನಾಂದಿ ಹಾಡಿರುವ ಸ್ಯಾಮ್‌ಸಂಗ್‌ ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯ ಸಾಧಿಸಿರೋದು ನಿಮಗೆಲ್ಲಾ ಗೊತ್ತೆ ಇದೆ. ಅಷ್ಟೆ ಅಲ್ಲ ಪ್ರತಿ ಭಾರಿಯು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಸ್ಯಾಮ್‌ಸಂಗ್‌ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಲು ಮುಂದಾಗಿದೆ.

ಹೌದು

ಹೌದು, ದಕ್ಷಿಣ ಕೋರಿಯಾದ ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ M ಸರಣಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫಫೋನ್‌ ಬಿಡುಗಡೆಗೆ ವೇದಿಕೆ ಸಿದ್ದಪಡಿಸುತ್ತಿದೆ. ಈಗಾಗ್ಲೆ ಎಲ್ಲರಿಗೂ ತಿಳಿದಿರುವಂತೆ ಈ ಹೊಸ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M51 ಆಗಿರಲಿದ್ದು, ಹೊಸ ಮಾದರಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಹಾಕಲಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಮೇ ತಿಂಗಳಲ್ಲಿ ಬಿಡುಗಡೆ ಆಗುವ ಸಾಧ್ಯತೆ ಕೂಡ ಇದೆ. ಆದರೆ ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಆನ್‌ಲೈನ್‌ನಲ್ಲಿ ಇದರ ಫೀಚರ್ಸ್‌ ಲೀಕ್‌ ಆಗಿದೆ.

ಲೀಕ್‌

ಸದ್ಯ ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗ್ತಿದೆ. ಜೊತೆಗೆ ಬಾಗಿದ ಅಂಚುಗಳಿಲ್ಲದ ಫ್ಲ್ಯಾಟ್‌ ಡಿಸ್‌ಪ್ಲೇ ಇದಾಗಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದ್ದು, ಸಿಂಗಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ. ಅಲ್ಲದೆ ಆನ್‌ಲೀಕ್‌ ಆದ ಇಮೇಜ್‌ಗಳ ಪ್ರಕಾರ ಈ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ ಸರಣಿಯ ಫೋನ್ ಪಂಚ್-ಹೋಲ್ ಡಿಸ್‌ಪ್ಲೇ ವಿನ್ಯಾಸದೊಂದಿಗೆ ಬರಲಿದೆ ಎಂದು ಹೇಳಲಾಗ್ತಿದೆ.

ಡಿಸ್‌ಪ್ಲೇ

ಇನ್ನು ಡಿಸ್‌ಪ್ಲೇ ಮೇಲಿನ ಎಡಭಾಗದಲ್ಲಿ ಇರಿಸಲಾಗಿರುವ ಕಟ್- ಔಟ್‌ನಲ್ಲಿ ಸೆಲ್ಫಿ ಕ್ಯಾಮೆರಾ ಇರಲಿದ್ದು, ಉತ್ತಮ ಮೆಗಾಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ ಸಾಧ್ಯತೆ ಇದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ತೆಳುವಾದ ಬೆಜೆಲ್‌ಗಳನ್ನು ಹೊಂದಿರಲಿದೆ. ಅಲ್ಲದೆ ಲಬ್ಯ ಮಾಹಿತಿಯ ಪ್ರಕಾರ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಆಯತಾಕಾರದ ಮಾಡ್ಯೂಲ್‌ನಲ್ಲಿ ಕಂಡುಬರುವ ಸಾಧ್ಯತೆ ಇರುವುದು ರೆಂಡರ್‌ನಲ್ಲಿ ಕಾಣಿಸುತ್ತಿದೆ. ಇನ್ನು ಸ್ಯಾಮ್‌ಸಂಗ್‌ ಈ ಸಂಬಂಧ 360 ಡಿಗ್ರಿ ರೆಂಡರ್ ವೀಡಿಯೊವನ್ನು ಪ್ರಕಟಿಸಿದೆ ಇದರಲ್ಲಿ ಈ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M40ನ ಮುಂದುವರೆದ ಆವೃತ್ತಿಯಾಗಿರಲಿದೆ.

ಸ್ಯಾಮ್‌ಸಂಗ್

ಇದಲ್ಲದೆ, ಸ್ಯಾಮ್‌ಸಂಗ್ ಕಂಪೆನಿ ಈ ಸ್ಮಾರ್ಟ್‌ಫೋನ್‌ ಅನ್ನು ಯಾವಾಗ ಬಿಡುಗಡೆ ಗೊಳಿಸಲಿದೆ ಅನ್ನೊದು ಇನ್ನು ಖಚಿತವಾಗಿಲ್ಲ. ಆದರೂ ಇದೇ ಮೇ ತಿಂಗಳಲ್ಲಿ ಈ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗುವ ಸಾಧ್ಯತೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಸ್ಮಾರ್ಟ್‌ಫೋನ್‌ 3.5 ಎಂಎಂ ಆಡಿಯೊ ಜ್ಯಾಕ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ನ ಕೆಳ ತುದಿಯಲ್ಲಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್ ಇರುವ ಸಾಧ್ಯತೆ ಕೂಡ ಇದೆ.

Most Read Articles
Best Mobiles in India

English summary
Samsung Galaxy M51 may launch with triple rear cameras, punch-hole display.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X