Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಫೋನ್ ಲಾಂಚ್!..7000mAh ಬ್ಯಾಟರಿ ಬ್ಯಾಕ್‌ಅಪ್!

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ಬಹುನಿರೀಕ್ಷಿತ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ ಅನ್ನು ಜರ್ಮನಿಯಲ್ಲಿ ಬಿಡುಗಡೆ ಮಾಡಿದೆ. ಸಂಸ್ಥೆಯು ಈಗಾಗಲೇ ಗ್ಯಾಲಕ್ಸಿ M ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್ ಪರಿಚಯಿಸಿದ್ದು, ಆ ಲಿಸ್ಟ್‌ಗೆ ಗ್ಯಾಲಕ್ಸಿ M51 ಈಗ ಹೊಸ ಸೇರ್ಪಡೆ ಆಗಿದೆ. 7000mAh ಬ್ಯಾಟರಿ ಲೈಫ್‌, ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಈ ಸ್ಮಾರ್ಟ್‌ಫೋನಿನ ಅತೀ ಆಕರ್ಷಕ ಫೀಚರ್ಸ್‌ಗಳಾಗಿ ಗಮನ ಸೆಳೆಯಲಿವೆ.

ಗ್ಯಾಲಕ್ಸಿ M51

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಸೂಪರ್ sAMOLED ಇನ್‌ಫಿನಿಟಿ O ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅನುಪಾತವು 86.7% ಪರ್ಸೆಂಟ್ ಆಗಿದೆ.

ಪ್ರೊಸೆಸರ್‌ ದಕ್ಷತೆ

ಪ್ರೊಸೆಸರ್‌ ದಕ್ಷತೆ

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730 ಪ್ರೊಸೆಸರ್ ಹೊಂದಿದ್ದು, ಒನ್‌UI ಜೊತೆ ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 6GB RAM ಮತ್ತು 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ವಾಡ್ ಕ್ಯಾಮೆರಾ ಸೆನ್ಸಾರ್

ಕ್ವಾಡ್ ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಕ್ವಿಕ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 10 ಓಎಸ್‌, 4G VoLTE, ವೈಫೈ, ಬ್ಲೂಟೂತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ

ಬೆಲೆ ಎಷ್ಟು ಮತ್ತು ಲಭ್ಯತೆ

ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಸ್ಟೋರೇಜ್‌ ವೇರಿಯಂಟ್ ಬೆಲೆಯು ಜರ್ಮನಿಯಲ್ಲಿ EUR 360 ಆಗಿದೆ. ಇನ್ನು ಭಾರತದಲ್ಲಿ ಈ ಫೋನ್ ಬೆಲೆಯು ಅಂದಾಜು 25000 ದಿಂದ 31,500ರೂ ಅಂತರದಲ್ಲಿ ಇರಲಿದೆ ಎಂದು ಊಹಿಸಲಾಗಿದೆ. ಆದರೆ ಯಾವಾಗ ಎಂಟ್ರಿ ಕೊಡಲಿದೆ ಎನ್ನುಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಬ್ಲ್ಯಾಕ್ ಹಾಗೂ ವೈಟ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Galaxy M51 packs 6GB of RAM, 128GB of storage, and is offered in black and white colours.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+