Just In
- 17 min ago
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- 1 hr ago
ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?
- 1 hr ago
ನೀವು ಎಸ್ಬಿಐ ಗ್ರಾಹಕರೇ?... ಯುಪಿಐ ಪೇಮೆಂಟ್ ಮಾಡುವಾಗ ಈ ಅಂಶಗಳ ಬಗ್ಗೆ ಎಚ್ಚರವಹಿಸಿ!
- 3 hrs ago
ಭಾರತದಲ್ಲಿ ಇನ್ಫಿನಿಕ್ಸ್ ಝೀರೋ ಬುಕ್ ಅಲ್ಟ್ರಾ ಲ್ಯಾಪ್ಟಾಪ್ ಲಾಂಚ್; ಏನೆಲ್ಲಾ ಫೀಚರ್ಸ್ ಇವೆ ಗೊತ್ತಾ!?
Don't Miss
- News
Assembly election 2023: ಇನ್ನೊಂದು ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಎಚ್.ಡಿ.ಕೆ
- Movies
ನನ್ನ ಖಾಸಗಿ ಭಾಗಕ್ಕೆ ಹೊಡೆಯುತ್ತಿದ್ದ: ಬಾಯ್ಫ್ರೆಂಡ್ ನೀಡಿದ ಚಿತ್ರಹಿಂಸೆ ಬಿಚ್ಚಿಟ್ಟ 'ನಮ್ಮಣ್ಣ' ನಾಯಕಿ
- Automobiles
ಹೋಂಡಾ ಆಕ್ಟೀವಾ 6Gಗೆ ಸೆಡ್ಡು ಹೊಡೆಯಲು ಮಾರುಕಟ್ಟೆಗಿಳಿದ ಹೀರೋ Xoom... ಏನಿದರ ವಿಶೇಷತೆ!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Sports
WIPL 2023: ಮಹಿಳಾ ಐಪಿಎಲ್ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಆಗಿ ಮಿಥಾಲಿ ರಾಜ್ ನೇಮಕ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಸ್ಯಾಮ್‌ಸಂಗ್‌ನ ಈ ಜನಪ್ರಿಯ 5G ಸ್ಮಾರ್ಟ್‌ಫೋನಿಗೆ ಈಗ ಭರ್ಜರಿ ಡಿಸ್ಕೌಂಟ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಇತ್ತೀಚಿಗೆ ಗ್ಯಾಲಕ್ಸಿ M ಸರಣಿಯಲ್ಲಿ ಭಿನ್ನ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಅಗ್ಗದ ಫೋನ್‌ಗಳು ಇವೆ, ಹಾಗೆಯೇ ಮೀಡ್‌ರೇಂಜ್ ಬೆಲೆಯ ಫೋನ್‌ಗಳು ಸೇರಿವೆ. ಅವುಗಳಲ್ಲಿ ಇತ್ತೀಚಿಗಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನ್ ಕೆಲವೊಂದು ಆಕರ್ಷಕ ಫೋನ್‌ಗಳನ್ನು ಪಡೆದಿದ್ದು, ಗ್ರಾಹಕರನ್ನು ಸೆಳೆದಿದೆ. ಆದ್ರೆ ಇದೀಗ ದೊಡ್ಡ ಮೊತ್ತದ ರಿಯಾಯಿತಿ ಪಡೆದಿದ್ದು, ಗ್ರಾಹಕರು ತಿರುಗಿ ನೋಡುವಂತಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನ್ 120Hz ಸೂಪರ್ AMOLED ಪ್ಲಸ್ ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಆಕ್ಟಾ ಕೋರ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್ ಪವರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇಂತಹ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಫೋನ್ ಕಳೆದ ವರ್ಷ 29,999ರೂ. ಗಳ ಆರಂಭಿಕ ಬೆಲೆಯೊಂದಿಗೆ ಮಾರುಕಟ್ಟೆಗೆ ಎಂಟ್ರಿ ನೀಡಿತ್ತು. ಆದ್ರೆ ಈಗ ಶೇ. 30% ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನ್ ಇದೀಗ ಭರ್ಜರಿ ರಿಯಾಯಿತಿ ಪಡೆದಿದ್ದು, 9,000 ರೂ. ಗಳ ಡಿಸ್ಕೌಂಟ್ ಹೊಂದಿದೆ. ಡಿಸ್ಕೌಂಟ್ ಬಳಿಕ 6 GB RAM + 128 GB ಸ್ಟೋರೇಜ್ ರೂಪಾಂತರದ ಬೆಲೆ 20,999 ರೂ. ಆಗಿದೆ. ಇನ್ನು ರಿಲಯನ್ಸ್ ಡಿಜಿಟಲ್ ಮೂಲಕ ಮಾತ್ರ ರಿಯಾಯಿತಿ ದರವು ಅನ್ವಯಿಸುತ್ತದೆ. ಇದೊಂದು ಸಿಮೀತ ಅವಧಿಯ ಕೊಡುಗೆ ಆಗಿದೆ. ಆದಾಗ್ಯೂ, ರಿಯಾಯಿತಿಯು ಲಭ್ಯವಿರುವ ಅವಧಿಯ ನಿಖರವಾದ ವಿವರಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ರಿಲಯನ್ಸ್ ಡಿಜಿಟಲ್ ಸಿಟಿಬ್ಯಾಂಕ್ ಕಾರ್ಡ್‌ಗಳ ಮೂಲಕ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G (Samsung Galaxy M52 5G) ಫೋನ್ ಅನ್ನು ಖರೀದಿಸುವ ಗ್ರಾಹಕರಿಗೆ 10 ಪ್ರತಿಶತ ತ್ವರಿತ ರಿಯಾಯಿತಿಯನ್ನು ಸಹ ನೀಡುತ್ತಿದೆ. ಹಾಗೆಯೇ ಇಂಡಸ್ಇಂಡ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ EMI ವಹಿವಾಟಿನ ಮೇಲೆ 1,500 ರೂ. ಗಳ ಕ್ಯಾಶ್‌ಬ್ಯಾಕ್ ದೊರೆಯಲಿದೆ. ಆಫರ್ ರಿಲಯನ್ಸ್ ಡಿಜಿಟಲ್‌ಗೆ ಸೀಮಿತವಾಗಿದೆ ಎಂಬುದನ್ನು ಗಮನಿಸುವುದು ಮುಖ್ಯ. ಈ ಫೋನ್ ಬ್ಲೇಜಿಂಗ್ ಬ್ಲ್ಯಾಕ್ ಮತ್ತು ಐಸಿ ಬ್ಲೂ ಬಣ್ಣಗಳಲ್ಲಿ ಲಭ್ಯ. ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಪವರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒಂದು UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಣೆ ಮಾಡಬಹುದಾಗಿದೆ.

ತ್ರಿವಳಿ ಕ್ಯಾಮೆರಾ ಸೆನ್ಸಾರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ವೈಡ್ ಆಂಗಲ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿಯನ್ನು ಒಳಗೊಂಡಿದ್ದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 48 ಗಂಟೆಗಳ ಟಾಕ್ ಟೈಮ್ ಅಥವಾ 20 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಅನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS, NFC, ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಡಿಸ್ಕೌಂಟ್ ಬಳಿಕ 6 GB RAM + 128 GB ಸ್ಟೋರೇಜ್ ರೂಪಾಂತರದ ಬೆಲೆ 20,999 ರೂ. ಆಗಿದೆ. ಇದು ಸಿಮೀತ ಅವಧಿಯ ಕೊಡಗೆ ಆಗಿದೆ. ಈ ಫೋನ್ ಬ್ಲೇಜಿಂಗ್ ಬ್ಲ್ಯಾಕ್ ಮತ್ತು ಐಸಿ ಬ್ಲೂ ಬಣ್ಣಗಳಲ್ಲಿ ದೊರೆಯುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್ 6.46 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸೂಪರ್ AMOLED ಇನ್‌ಫೀನಿಟಿ O ಡಿಸ್‌ಪ್ಲೇಯನ್ನು ಪಡೆದಿದೆ. ಈ ಡಿಸ್‌ಪ್ಲೇ 90Hz ಸಾಮರ್ಥ್ಯದ ಸ್ಕ್ರೀನ್ ರಿಫ್ರೇಶ್ ರೇಟ್ ಅನ್ನು ಪಡೆದಿದೆ.ಹಾಗೆಯೇ ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720G ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಪಡೆದುಕೊಂಡಿದೆ.

ಇದು ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿದೆ. ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470