Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನಿಗೆ ಇಷ್ಟೊಂದು ಡಿಸ್ಕೌಂಟಾ!

ಪ್ರಸ್ತುತ ಹಬ್ಬದ ಸಂದರ್ಭದಲ್ಲಿ ಇ ಕಾಮರ್ಸ್‌ ತಾಣಗಳು ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ರಿಯಾಯಿತಿಯಲ್ಲಿ ಘೋಷಿಸುತ್ತವೆ. ಅದೇ ರೀತಿ ಮೊಬೈಲ್‌ ಕಂಪನಿಗಳು ಸಹ ತಮ್ಮ ಸ್ಮಾರ್ಟ್‌ಫೋಣ್‌ಗಳಿಗೆ ಕೊಡುಗೆ ತಿಳಿಸುತ್ತವೆ. ಇದೀಗ ಜನಪ್ರಿಯ ಮೊಬೈಲ್‌ ತಯಾರಿಕಾ ಸಂಸ್ಥೆ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನಿಗೆ ಭರ್ಜರಿ ಡಿಸ್ಕೌಂಟ್‌ ತಿಳಿಸಿದ್ದು, ಗ್ರಾಹಕರು ಹಿಂತಿರುಗಿ ನೋಡುವಂತಾಗಿದೆ.

ಗ್ರಾಹಕರು

ಹೌದು, ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ M52 5G ಫೋನಿನ ಬೆಲೆಯಲ್ಲಿ ಕಡಿತ ಮಾಡಿದೆ. ಗ್ರಾಹಕರು ಈ ಸ್ಮಾರ್ಟ್‌ಫೋನ್‌ ಅನ್ನು 5,000 ರೂ.ಗಳ ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಫೋನ್ ಕಳೆದ ತಿಂಗಳು ಭಾರತದಲ್ಲಿ ಬೇಸ್‌ ವೇರಿಯಂಟ್‌ 29,999 ರೂ. ಪ್ರೈಸ್‌ ಟ್ಯಾಗ್‌ ನಲ್ಲಿ ಬಿಡುಗಡೆ ಆಗಿತ್ತು. ಇದೀಗ ಬೆಲೆ ಇಳಿಕೆಯಿಂದಾಗಿ 6GB+128GB ಸ್ಟೋರೇಜ್‌ನ ಬೇಸ್ ವೇರಿಯಂಟ್‌ 24,999 ರೂ. ಗಳಲ್ಲಿ ಲಭ್ಯವಾಗಲಿದೆ.

ಫೋನ್‌

ಅದೇ ರೀತಿ 8 GB+128 GB ಸ್ಟೋರೇಜ್‌ ವೇರಿಯಂಟ್ 26,999 ರೂ. ಗಳಲ್ಲಿ ಲಭ್ಯ ವಾಗಲಿದೆ. ಈ ಕೊಡುಗೆಯು ಆಫ್‌ಲೈನ್‌ ಸ್ಟೋರ್‌ಗಳಲ್ಲಿ ಲಭ್ಯ ಇದೆ. ಹಾಗೆಯೇ ಆಸಕ್ತ ಖರೀದಿದಾರರು ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್‌ಗೆ ಮೂಲಕವು ಗ್ಯಾಲಕ್ಸಿ M52 5G ಫೋನ್‌ ಖರೀದಿಸ ಬಹುದು. ಈ ಫೋನ್ ಬ್ಲೇಜಿಂಗ್ ಬ್ಲ್ಯಾಕ್ ಮತ್ತು ಐಸಿ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್-ಎಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒಂದು UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಣೆ ಮಾಡಬಹುದಾಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಟ್ರಿಪಲ್ ಕ್ಯಾಮೆರಾ ಸೆನ್ಸಾರ್

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್ ಆಂಗಲ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿ ಯನ್ನು ಒಳಗೊಂಡಿದ್ದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಸಿಂಗಲ್‌ ಚಾರ್ಜ್‌ ನಲ್ಲಿ 48 ಗಂಟೆ ಗಳ ಟಾಕ್ ಟೈಮ್ ಅಥವಾ 20 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಅನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS, A-GPS, NFC, ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ ಸದ್ಯ ಕೊಡುಗೆಯಲ್ಲಿ 24,999 ರೂ. ಪ್ರೈಸ್‌ನಲ್ಲಿ ಕಾಣಿಸಿಕೊಂಡಿದೆ. ಅದೇ ರೀತಿ 8GB + 128GB ವೇರಿಯಂಟ್ ಆಯ್ಕೆಗೆ 26,999ರೂ. ಬೆಲೆ ಹೊಂದಿದೆ. ಈ ಫೋನ್‌ ಬ್ಲೇಜಿಂಗ್ ಬ್ಲ್ಯಾಕ್ ಮತ್ತು ಐಸಿ ಬ್ಲೂ ಬಣ್ಣಗಳ ಆಯ್ಕೆ ಪಡೆದಿದೆ. ಈ ಫೋನ್ ಆಫ್‌ಲೈನ್ ಸ್ಟೋರ್‌ ಹಾಗೂ ಸ್ಯಾಮ್‌ಸಂಗ್ ವೆಬ್‌ಸೈಟ್‌ ನಲ್ಲಿ ಲಭ್ಯ ಇದೆ.

Best Mobiles in India

English summary
Samsung Galaxy M52 5G Gets Big Discount Ahead Of Diwali: Here's Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+