Home
ಸುದ್ದಿಜಾಲ

Samsung: ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್‌ಗೆ ಭರ್ಜರಿ ರಿಯಾಯಿತಿ! 8GB RAM... 64 MP ಕ್ಯಾಮೆರಾ..

ಸ್ಯಾಮ್‌ಸಂಗ್‌ ಫೋನ್‌ಗಳಿಗೆ (Samsung phone) ದೊಡ್ಡ ಮಟ್ಟದ ಮಾರುಕಟ್ಟೆ ಎಂದರೆ ಅದು ಭಾರತ. ಇಲ್ಲಿ ಬಹುಪಾಲು ಜನರು ಹೊಸ ಹೊಸ ಸ್ಯಾಮ್‌ಸಂಗ್‌ ಫೋನ್‌ಗಳನ್ನು ಖರೀದಿ ಮಾಡಲು ಸದಾ ಮುಂದೆ ಇರುತ್ತಾರೆ. ಈ ನಡುವೆ ಸ್ಯಾಮ್‌ಸಂಗ್‌ ಫೋಲ್ಡಬಲ್‌ ಫೋನ್‌ಗಳನ್ನು ಸಹ ಅನಾವರಣ ಮಾಡಿದ್ದು, ಈ ಮೂಲಕ ತನ್ನ ಗ್ರಾಹಕರಿಗೆ ಹೊಸ ಅನುಭವ ನೀಡುತ್ತಿದೆ.

ಹೌದು, ಸ್ಯಾಮ್‌ಸಂಗ್‌ ಫೋನ್‌ಗಳೆಂದರೆ ಜನರಿಗೆ ಅಚ್ಚು ಮೆಚ್ಚು. ಈ ಫೋನ್‌ಗಳ ಉತ್ತಮ ಕಾರ್ಯಕ್ಷಮತೆ ಹಾಗೂ ದೀರ್ಘ ಬಾಳಿಕೆ ಸಾಮರ್ಥ್ಯದ ಹಿನ್ನೆಲೆ ಇವುಗಳ ಕಡೆಗೆ ಜನರು ಹೆಚ್ಚಾಗಿ ವಾಲುತ್ತಾರೆ. ಈ ಬೆಳವಣಿಗೆ ನಡುವೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ಗೆ (Samsung Galaxy M52 5G smartphone) ಭಾರೀ ಆಫರ್ ನೀಡಲಾಗಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, 8GB RAM ಆಯ್ಕೆ ಪಡೆಯುವ ಮೂಲಕ ಬಳಕೆದಾರರಿಗೆ ಇನ್ನಷ್ಟು ಹೊಸ ಅನುಭವ ನೀಡಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಆಫರ್ ವಿವರ ಹಾಗೂ ಫೀಚರ್ಸ್‌ ಬಗ್ಗೆ ನೋಡೋಣ ಬನ್ನಿ.

ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್‌ಗೆ ಭರ್ಜರಿ ರಿಯಾಯಿತಿ! 8GB RAM...

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಆಫರ್ ವಿವರ: ಈ ಸ್ಮಾರ್ಟ್‌ಫೋನ್ 34,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವು ಈಗ ಆಫರ್ ಬೆಲೆ 27,999ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಫ್ಲಿಪ್‌ಕಾರ್ಟ್ ‌(Flipkart) 20% ರಿಯಾಯಿತಿ ನೀಡಿದೆ. ಇದರೊಂದಿಗೆ ಇನ್ನೂ ಸ್ವಲ್ಪ ಹಣ ಉಳಿತಾಯ ಮಾಡಬೇಕು ಎಂದುಕೊಂಡರೆ ನೀವು ಬ್ಯಾಂಕ್‌ ಆಫರ್ ಬಳಕೆ ಮಾಡಿಕೊಳ್ಳಬಹುದು.

ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ ಬ್ಯಾಂಕ್ ಆಫರ್ 10% ರಿಯಾಯಿತಿ, ಸಿಟಿ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಐಡಿಎಫ್‌ಸಿ ಮೊದಲ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ ಸೇರಿದಂತೆ ವಿವಿಧ ರೀತಿಯ ಆಫರ್ ಈ ಫೋನ್‌ಗೆ ಇದೆ.

ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್‌ಗೆ ಭರ್ಜರಿ ರಿಯಾಯಿತಿ! 8GB RAM...

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್ 120 Hz ರಿಫ್ರೆಶ್ ರೇಟ್‌ ಆಯ್ಕೆಯೊಂದಿಗೆ 6.70 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಇದು 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ 20:9 ರ ಆಕಾರ ಅನುಪಾತವನ್ನು ಪಡೆದಿದ್ದು, ಗೊರಿಲ್ಲಾ ಗ್ಲಾಸ್ ರಕ್ಷಣೆ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಪ್ರೊಸೆಸರ್‌ ಮಾಹಿತಿ: ಈ ವಿಶೇಷವಾದ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು. ಈ ಸಿಪಿಯು 1.8GHz ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರೊಂದಿಗೆ 8GB RAM ಹಾಗೂ 128 GB ಇಂಟರ್‌ ಸ್ಟೋರೇಜ್ ಆಯ್ಕೆ ನೀಡಲಾಗಿದ್ದು, ಇನ್ನೂ ಹೆಚ್ಚಿನ ಸ್ಟೋರೇಜ್‌‌ ಬೇಕು ಎಂದರೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಕೆ ಮಾಡಬಹುದಾಗಿದೆ. ಜೊತೆಗೆ ಈ ಫೋನ್ ಆಂಡ್ರಾಯ್ಡ್‌ 11 ಅನ್ನು ರನ್ ಮಾಡುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದ್ದು, ಅದರಲ್ಲಿ 64 ಮೆಗಾಪಿಕ್ಸೆಲ್ (f/1.8) ಪ್ರಾಥಮಿಕ ಸೆನ್ಸರ್‌, 12 ಮೆಗಾಪಿಕ್ಸೆಲ್ (f/2.2) ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ (f/ 2.4) ಕ್ಯಾಮೆರಾ ಆಯ್ಕೆ ಇದೆ. ಈ ಸೆನ್ಸರ್‌ಗಳು ಆಟೋಫೋಕಸ್ ಸೌಲಭ್ಯದಲ್ಲಿ ಅತ್ಯುತ್ತಮ ಫೋಟೋ ಸೆರೆಹಿಡಿಯಲಿವೆ. ಇದರೊಂದಿಗೆ 32 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಸ್ಯಾಮ್‌ಸಂಗ್‌ನ ಈ ಬಹುಬೇಡಿಕೆಯ ಫೋನ್‌ಗೆ ಭರ್ಜರಿ ರಿಯಾಯಿತಿ! 8GB RAM...

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಬ್ಯಾಟರಿ ಹಾಗೂ ಇತರೆ: ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದ್ದು, ವೈ-ಫೈ 802.11 a/b/g/n/ac/6, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.0, A2DP, LE, GPS, ಗ್ಲೋನಾಸ್, ಗೆಲಿಲಿಯೋ, BDS, ಯುಎಸ್‌ಬಿ ಟೈಪ್‌-ಸಿ ಸೇರಿದಂತೆ ಅನೇಕ ಕನೆಕ್ಟಿವಿಟಿ ಸೌಲಭ್ಯ ಪಡೆದಿದೆ.

Best Mobiles in India

English summary
Samsung Galaxy M52 5G smartphone has a huge offer. This phone will be powered by a Qualcomm Snapdragon 778G processor and will offer a new experience to the users by getting an 8GB RAM option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+