Home
ಸುದ್ದಿಜಾಲ

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಬಿಡುಗಡೆ!

ದಕ್ಷಿಣ ಕೋರಿಯಾ ಮೂಲದ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸೈ ಎನಿಸಿಕೊಂಡಿದೆ. ಈಗಾಗಲೇ ಗ್ಯಾಲಕ್ಸಿ ಎ, ಎಂ, ಎಫ್‌ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೀಗ ತನ್ನ ಹೊಸ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ ಈ ಫೋನ್‌ 120Hz ಸೂಪರ್ AMOLED ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಅನ್ನು ಹೊಂದಿರಲಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 52 5ಜಿ ಸ್ಮಾರ್ಟ್‌ಫೋನ್‌ ಮೂರು ವಿಭಿನ್ನ ಬಣ್ಣ ಆಯ್ಕೆಗಳಲ್ಲಿ ಪಟ್ಟಿ ಮಾಡಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ ಹೆಚ್‌ಡಿ+ ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, 120Hz ವರೆಗಿನ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಸೂಪರ್ AMOLED ಡಿಸ್‌ಪ್ಲೇ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಫೋನ್‌ ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ಹೇಗಿದೆ

ಕ್ಯಾಮೆರಾ ಹೇಗಿದೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಪೋಲೆಂಡ್‌ನ ರಿಟೇಲರ್ ಸೈಟ್‌ನಲ್ಲಿ PLN 1,749 (ಸರಿಸುಮಾರು ರೂ. 32,900) ಬೆಲೆ ಹೊಂದಿದೆ. ಇದು ಕಪ್ಪು, ನೀಲಿ ಮತ್ತು ಬಿಳಿ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಸೆಪ್ಟೆಂಬರ್ 19 ಕ್ಕೆ ನಿಗದಿಪಡಿಸಲಾಗಿದೆ.

Best Mobiles in India

English summary
Samsung Galaxy M52 5G has quietly been launched in Poland — just days ahead of its official arrival in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+