ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಫೋನ್ ಲಾಂಚ್! ಫೀಚರ್ಸ್ ಹೇಗಿದೆ?
ದಕ್ಷಿಣ ಕೋರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್‌ನ ಉತ್ತರಾಧಿಕಾರಿಯಾಗಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಫೋನ್ 120Hz ಸೂಪರ್ AMOLED ಪ್ಲಸ್ ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹೆಚ್ಚುವರಿಯಾಗಿ, 7.4 ಮಿಮೀ ಥಿಕ್‌ನೆಸ್ ಹೊಂದಿರುವ ಸ್ಲಿಮ್ ಬಿಲ್ಡ್ ಇದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಡಾಲ್ಬಿ ಅಟ್ಮಾಸ್ ಸೌಂಡ್ ಸಪೋರ್ಟ್ ಅನ್ನು ಕೂಡ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್-ಎಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒಂದು UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ಫೀಚರ್ಸ್
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್ ಆಂಗಲ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 32-ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಒಳಗೊಂಡಿದ್ದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಸಿಂಗಲ್ ಚಾರ್ಜ್‌ನಲ್ಲಿ 48 ಗಂಟೆಗಳ ಟಾಕ್ ಟೈಮ್ ಅಥವಾ 20 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ಅನ್ನು ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS, NFC, ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಭಾರತದಲ್ಲಿ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ 29,999.ರೂ ಹಾಗೂ 8GB + 128GB ಆಯ್ಕೆಗೆ 31,999. ರೂ ಬೆಲೆ ಹೊಂದಿದೆ. ಆದರೆ ಲಾಂಚ್ ಆಫರ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಕ್ರಮವಾಗಿ 26,999 ಮತ್ತು 28,999. ರೂ ಬೆಲೆಗೆ ಲಭ್ಯವಾಗಲಿದೆ. ಈ ಫೋನ್ ಬ್ಲೇಜಿಂಗ್ ಬ್ಲ್ಯಾಕ್ ಮತ್ತು ಐಸಿ ಬ್ಲೂ ಬಣ್ಣಗಳಲ್ಲಿ ಬರುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಅಮೆಜಾನ್, ಸ್ಯಾಮ್‌ಸಂಗ್.ಕಾಮ್ ಮತ್ತು ಆಯ್ದ ರಿಟೇಲ್ ಸ್ಟೋರ್‌ಗಳ ಮೂಲಕ ಅಕ್ಟೋಬರ್ 3 ರಿಂದ ಖರೀದಿಗೆ ಲಭ್ಯವಿರುತ್ತದೆ.


Click it and Unblock the Notifications








