ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಲಾಂಚ್ ಡೇಟ್ ಫಿಕ್ಸ್!
ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಈಗಾಗಲೇ ಗ್ಯಾಲಕ್ಸಿ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್ ಪರಿಚಯಿಸಿ ಸೈಎನಿಸಿಕೊಂಡಿದೆ ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಇದೀಗ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಅಮೆಜಾನ್ ಟೀಸರ್ ಪ್ರಕಾರ ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಬಿಡುಗಡೆ ದಿನಾಂಕವನ್ನು ದಿನಾಂಕವನ್ನು ಸೆಪ್ಟೆಂಬರ್ 19 ಕ್ಕೆ ನಿಗದಿಪಡಿಸಲಾಗಿದೆ.

ಹೌದು, ಭಾರತದಲ್ಲಿ ಸ್ಯಾಮ್‌ಸಂಗ್ ಕಂಪೆನಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಪರಿಚಯಿಸಲು ಡೇಟ್ ಫಿಕ್ಸ್ ಮಾಡಿದೆ. ಇನ್ನು ಈ ಹೊಸ ಸ್ಯಾಮ್ಸಂಗ್ ಫೋನ್ ಕಳೆದ ವರ್ಷ ಬಿಡುಗಡೆಯಾಗಿದ್ದ ಗ್ಯಾಲಕ್ಸಿ M51 ನ ಉತ್ತರಾಧಿಕಾರಿಯಾಗಿದೆ. ಈ ಸ್ಮಾರ್ಟ್‌ಫೋನ್ 120Hz ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗಾದ್ರೆ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಇದು ಸೂಪರ್ AMOLED ಡಿಸ್‌ಪ್ಲೇ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB ಮತ್ತು 8GB RAM ಹಾಗೂ 128GB ಇಂಟರ್ ಸ್ಟೋರೇಜ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 7000 mAh ಸಾಮರ್ಥ್ಯದ ಬಿಗ್ ಬ್ಯಾಟರಿ ಹೊಂದಿರಲಿದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್‌ಟಿಇ, ವೈ-ಫೈ, ಬ್ಲೂಟೂತ್ ವಿ 5, ಜಿಪಿಎಸ್/ ಎ-ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿರುತ್ತದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಸಹ ಹೊಂದಿರಲಿದೆ ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ ಎಷ್ಟರಿಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ. ಆದರೆ ಅಮೆಜಾನ್ ಬಿಡುಗಡೆ ಮಾಡಿರುವ ಟೀಸರ್‌ನಲ್ಲಿ ಈ ಸ್ಮಾರ್ಟ್‌ಫೋನ್ ಇದೇ ತಿಂಗಳು 19ಕ್ಕೆ ಲಾಂಚ್ ಆಗಲಿದೆ ಎಂದು ಹೇಳಲಾಗಿದೆ. ಆದರೆ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಹೊಸ 5G ಮಿಡ್ ರೇಂಜ್ ಸ್ಮಾರ್ಟ್ ಫೋನ್ ಆಗಿರಲಿದೆ. ಅಮೆಜಾನ್ ಇಂಡಿಯಾದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 52 ಟೀಸರ್‌ನಲ್ಲಿ "ಮಾನ್ಸ್ಟರ್ ಈಸ್ ಬ್ಯಾಕ್" ಎಂದು ಹೇಳಲಾಗಿದೆ.


Click it and Unblock the Notifications








