ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಫೀಚರ್ಸ್‌ ಲೀಕ್!..ಎಷ್ಟು ಎಂಪಿ ಕ್ಯಾಮೆರಾ?

|

ದಕ್ಷಿಣ ಕೊರಿಯಾ ಟೆಕ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಈಗಾಗಲೇ ಗ್ಯಾಲಕ್ಸಿ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಲಾಂಚ್‌ ಮಾಡಲು ಸಕಲ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನಿನ ಕೆಲವು ಲೀಕ್ ಫೀಚರ್ಸ್‌ ಮೊಬೈಲ್ ಪ್ರಿಯರ ಗಮನ ಸೆಳೆದಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಫೀಚರ್ಸ್‌ ಲೀಕ್!..ಎಷ್ಟು ಎಂಪಿ ಕ್ಯಾಮೆರಾ?

ಹೌದು, ಭಾರತದಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಅನ್ನು ಇದೇ ಮಾರ್ಚ್ 17 ರಂದು ಬಿಡುಗಡೆ ಮಾಡುವ ಸೂಚನೆ ಹೊರಹಾಕಿದೆ. ಇನ್ನು ಈ ಹೊಸ ಸ್ಯಾಮ್‌ಸಂಗ್ ಫೋನ್ ಕಳೆದ ವರ್ಷ ಬಿಡುಗಡೆಯಾಗಿದ್ದ ಗ್ಯಾಲಕ್ಸಿ M52 ನ ಉತ್ತರಾಧಿಕಾರಿಯಾಗಿದೆ. ಈ ಸ್ಮಾರ್ಟ್‌ಫೋನ್‌ S-AMOLED ಡಿಸ್‌ಪ್ಲೇ ಹೊಂದಿರಲಿದ್ದು, ಹಾಗೆಯೇ 120Hz ರೀಫ್ರೇಶ್ ರೇಟ್ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗಾದ್ರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಇತರೆ ಫೀಚರ್ಸ್‌ ಹೇಗಿರಲಿವೆ ಎನ್ನುವುದನ್ನು ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಫೀಚರ್ಸ್‌ ಲೀಕ್!..ಎಷ್ಟು ಎಂಪಿ ಕ್ಯಾಮೆರಾ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್ HD+ S-AMOLEDಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಹಾಗೆಯೇ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಡಿಸ್‌ಪ್ಲೇಯಲ್ಲಿ ಪಂಚ್ ಹೋಲ್‌ ಕಟ್‌ಔಟ್ ಇರುವ ಸಾಧ್ಯತೆಗಳಿವೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 ಚಿಪ್‌ಸೆಟ್‌ ಪ್ರೊಸೆಸರ್ ಬಲ ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್ ಪಡೆದಿರಲಿದೆ. ಅಲ್ಲದೇ 8GB RAM ಮತ್ತು 256GB ಆಂತರಿಕ ಸಂಗ್ರಹಣೆ ಆಯ್ಕೆ ಇರಲಿದೆ ಎಂದು ಹೇಳಲಾಗುತ್ತದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ ಹಾಗೂ ನಾಲ್ಕನೇ ಕ್ಯಾಮೆರಾಗಳು 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಫೀಚರ್ಸ್‌ ಲೀಕ್!..ಎಷ್ಟು ಎಂಪಿ ಕ್ಯಾಮೆರಾ?

ಹಾಗೆಯೇ ಈ ಹಿಂದಿನ ಗ್ಯಾಲಕ್ಸಿ M51 ಮತ್ತು ಗ್ಯಾಲಕ್ಸಿ M52 ಈ ಎರಡೂ ಫೋನ್‌ಗಳು ಕ್ವಾಲ್ಕಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ ಬಲ ಪಡೆದಿವೆ. ಆದ್ರೆ ಹೊಸ ಗ್ಯಾಲಕ್ಸಿ M53 5G ಫೋನ್ ಮೀಡಿಯಾ ಟೆಕ್ ಪ್ರೊಸೆಸರ್‌ನೊಂದಿಗೆ ಬರುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಗ್ಯಾಲಕ್ಸಿ M53 5G ಫೋನ್ 25W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದೆ ಎಂದು ಹೇಳಲಾಗುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್‌ಟಿಇ, ವೈ-ಫೈ, ಬ್ಲೂಟೂತ್ ವಿ 5, ಜಿಪಿಎಸ್/ ಎ-ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿರುತ್ತದೆ. ಜೊತೆಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಸಹ ಹೊಂದಿರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಫೋನ್ ಬೆಲೆಯು ಭಾರತದಲ್ಲಿ ಸರಿಸುಮಾರು 34,500 ರೂ. ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಹಿಂದಿನ ಗ್ಯಾಲಕ್ಸಿ M52 5G ಪ್ರಸ್ತುತ 24,999 ರೂ.ಗೆ ಮಾರಾಟವಾಗುತ್ತಿದೆ ಎಂಬುದನ್ನು ಗಮನಿಸುವುದು ಮುಖ್ಯ. ಗ್ಯಾಲಕ್ಸಿ M51 ಮತ್ತು ಗ್ಯಾಲಕ್ಸಿ M52 ಎರಡೂ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ನೊಂದಿಗೆ ಬಂದಿದ್ದರೆ, M53 5G ಮೀಡಿಯಾ ಟೆಕ್ ಪ್ರೊಸೆಸರ್‌ನೊಂದಿಗೆ ಬರುತ್ತದೆ ಎಂದು ಹೇಳಲಾಗುತ್ತದೆ.

Best Mobiles in India

English summary
Samsung Galaxy M53 5G Leaked Online; Check Specifications And Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X